BREAKING NEWS

ಮೈಸೂರು ದಸರಾ 2023: ಈ ಬಾರಿ ದಸರಾದಲ್ಲಿ 36 ಸ್ತಬ್ಧಚಿತ್ರಗಳು ಭಾಗಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಜೋರಾಗಿ ನಡೆದಿದೆ.‌ ಈ ಬಾರಿ ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕ ದಸರೆಗೆ ಸರ್ಕಾರ ಹೆಚ್ಚು ಒತ್ತು ಕೊಟ್ಟಿದೆ. ಅಕ್ಟೋಬರ್ 24ರ ವಿಜಯದಶಮಿಯಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಗಜಪಡೆಯ ಜಂಬೂಸವಾರಿಯ ಪ್ರಮುಖ ಆಕರ್ಷಣೆ ಸ್ತಬ್ಧಚಿತ್ರಗಳು.

ಈ ಬಾರಿಯೂ ದಸರಾ ಜಂಬೂಸವಾರಿಗೆ ಮೆರುಗು ನೀಡಲು 36 ಸ್ತಬ್ಧಚಿತ್ರಗಳು ಸಿದ್ದವಾಗಲಿವೆ. ರಾಜ್ಯದ 31 ಜಿಲ್ಲಾ ಪಂಚಾಯತಿಗಳು ಹಾಗೂ 5 ವಿವಿಧ ಇಲಾಖೆಯ ಸ್ತಬ್ಧಚಿತ್ರ ಸೇರಿ ಒಟ್ಟು 36 ಸ್ತಬ್ಧಚಿತ್ರಗಳು ಪ್ರದರ್ಶಗೊಳ್ಳಲಿವೆ.

ಪ್ರಮುಖ ಆಕರ್ಷಣೆ : ಅಂಬಾರಿ ಹೊತ್ತ ಅಭಿಮನ್ಯು ನೇತೃತ್ವದ ಗಜಪಡೆ, ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸಾಗುವುದನ್ನು ನೋಡುವುದೇ ಕಣ್ಣಿಗೆ ಹಬ್ಬ. ಇದರ ಜೊತೆ ಸ್ತಬ್ಧಚಿತ್ರಗಳು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಲಿವೆ.

ಅರಮನೆಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗಿನ ರಾಜಪಥದಲ್ಲಿ ಸಾಗುವ ಮೆರವಣಿಗೆಯಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಸೇರಿದಂತೆ ರಾಜ್ಯದ 31 ಜಿಲ್ಲಾ ಪಂಚಾಯತ್​ಗಳು, ವಿವಿಧ ಇಲಾಖೆಯ 5 ಸ್ತಬ್ದ ಚಿತ್ರಗಳೂ ಸೇರಿ ಒಟ್ಟು 36 ಸ್ತಬ್ಧಚಿತ್ರಗಳು ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಪ್ರವಾಸಿಗರು, ಸಾರ್ವಜನಿಕರನ್ನು ಆಕರ್ಷಿಸಲು ಉತ್ತಮ ರೀತಿಯಲ್ಲಿ ಸ್ತಬ್ಧಚಿತ್ರ ತಯಾರು ಮಾಡಲು ಸೂಚಿಸಲಾಗಿದೆ.

ಆಯಾಯ ಜಿಲ್ಲೆಯ ಪ್ರಾಕೃತಿಕ, ಭೌಗೋಳಿಕ ಹಾಗೂ ಐತಿಹಾಸಿಕ ವಿಶೇಷತೆಗಳನ್ನು ಒಳಗೊಂಡ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ತೀರ್ಮಾನಿಸಲಾಗಿದೆ.

ಅಕ್ಟೋಬರ್ 10 ರಿಂದ ಸಿದ್ದತೆ : ಸ್ತಬ್ಧಚಿತ್ರ ಚಿತ್ರಗಳ ತಯಾರಿ ನಾಳೆ (ಅಕ್ಟೋಬರ್ 10)ರಿಂದ ಮೈಸೂರು-ನಂಜನಗೂಡು ರಸ್ತೆಯ ಬಂಡಿಪಾಳ್ಯದ ಆವರಣದಲ್ಲಿ ಆರಂಭವಾಗಲಿದೆ.

ರಾಜ್ಯದ ಎಲ್ಲ 31 ಜಿಲ್ಲಾ ಪಂಚಾಯತಿಗಳ ಜೊತೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ, ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮತ್ತು ಸಮಾಜ ಕಲ್ಯಾಣ ಇಲಾಖೆ ಗಳ ಒಟ್ಟು 36 ಸ್ತಬ್ಧಚಿತ್ರಳು ನಿರ್ಮಾಣವಾಗಲಿದೆ.

ಇದೇ ಮೊದಲ ಬಾರಿಗೆ ಮೈಸೂರು ವೈದ್ಯಕೀಯ ಕಾಲೇಜಿನ ಸ್ತಬ್ಧಚಿತ್ರ ದಸರೆಯಲ್ಲಿ ಪಾಲ್ಗೊಳ್ಳಲಿದೆ. ಮೈಸೂರು ವೈದ್ಯಕೀಯ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಐತಿಹಾಸಿಕ ಹಿನ್ನೆಲೆ, ಭೂತ ವರ್ತಮಾನ ಮತ್ತು ಭವಿಷ್ಯದ ಚಿತ್ರಣವನ್ನು ಹೊಂದಿರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ತೀರ್ಮಾನಿಸಲಾಗಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಸರ್ಕಾರದ ಗೃಹಜ್ಯೋತಿ ಯೋಜನೆ ಮಾಹಿತಿ ಒಳಗೊಂಡ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ವಿದ್ಯುತ್ ಬಳಕೆ ಮಾಡುವ ವಿಧಾನವನ್ನು ಪರಿಚಯಿಸುತ್ತಿರುವುದು ವಿಶೇಷ.

ಯಾವ ಯಾವ ಜಿಲ್ಲೆಯ ಸ್ತಬ್ಧಚಿತ್ರಗಳು ಪ್ರದರ್ಶನ

ಹಾಗೆಯೇ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ನಿಯಮಿತ (ಕೆಎಂಫ್) ದಿಂದ ಕ್ಷೀರ ಭಾಗ್ಯ ಯೋಜನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕರ್ನಾಟಕ ಪುಣ್ಯಕೋಟಿ ದತ್ತು ಯೋಜನೆ ಬಿಂಬಿಸುವ ಸ್ತಬ್ಧಚಿತ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತನ್ನ ವಿವಿಧ ಯೋಜನೆಗಳ ಮಾಹಿತಿ ಒಳ ಗೊಂಡ ಸ್ತಬ್ಧಚಿತ್ರ ಇರಲಿವೆ.

ಬಾಗಲಕೋಟೆ ಜಿಲ್ಲೆಯಿಂದ ಬಾದಾಮಿ ಚಾಲುಕ್ಯರು ಮತ್ತು ಬನಶಂಕರಿ ದೇವಿ ದೇವಸ್ಥಾನ, ಬಳ್ಳಾರಿಯಿಂದ ನಾರಿ ಹಳ್ಳ ಆಣೆಕಟ್ಟು, ಬೆಳಗಾವಿಯಿಂದ ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್ ಫಾಲ್ಸ್, ಬೆಂಗಳೂರಿನಿಂದ ಚಂದ್ರಯಾನ 3, ಚಾಮರಾಜನಗರದಿಂದ ಜಾನಪದ ಭಕ್ತಿಯ ಬೀಡು, ಆನೆ-ಹುಲಿಗಳ ಸಂತೃಪ್ತಿಯ ಕಾಡು, ಮಂಡ್ಯದಿಂದ ಸಾಂಪ್ರದಾಯಿಕ ಆಲೆಮನೆ, ಬೀದರ್‌ನಿಂದ ಕೃಷ್ಣಮೃಗ ಸಂರಕ್ಷಣಾಧಾಮ, ರಾಯಚೂರಿನಿಂದ ನವರಂಗ ದರ್ವಾಜ, ದಾಸರ ಮಂಟಪ ಮತ್ತು ಕಲ್ಲಿದ್ದಲು ವಿದ್ಯುತ್ ಸ್ಥಾವರ, ಹಾವೇರಿಯಿಂದ ಶಂಖನಾದ ಮೊಳಗಿಸುತ್ತಿರುವ ಕನಕದಾಸರು ಮತ್ತು ಕಾಗಿನೆಲೆ, ರಾಮನಗರದಿಂದ ಚನ್ನಪಟ್ಟಣದ ಬೊಂಬೆಗಳು, ಶಿವಮೊಗ್ಗದಿಂದ ಕುವೆಂಪು ಗುಡವಿ ಪಕ್ಷಿಧಾಮ, ಕೆಳದಿ ಶಿವಪ್ಪ ನಾಯಕ, ತುಮಕೂರಿನಿಂದ ಮೂಡಲಪಾಯ ಯಕ್ಷಗಾನ ಹಾಗೂ ವಾಸ್ತುಶಿಲ್ಪ ಮತ್ತು ಉಡುಪಿಯಿಂದ ತ್ಯಾಜ್ಯ ಮುಕ್ತ ಮತ್ಯ ಸ್ನೇಹಿ ಸಮುದ್ರ, ವಿಜಯನಗರದಿಂದ ವಿಜಯವಿಠಲ ದೇವಾಲಯ ಸೇರಿದಂತೆ 31 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ.

andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

3 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

3 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

3 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

3 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

3 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

3 hours ago