BREAKING NEWS

ಮೈಸೂರಿನ ಪಿಎಸ್​ಐ ಅಶ್ವಿನಿ ಅನಂತಪುರ ಅಮಾನತು

ಮೈಸೂರು: ನಗರದ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ  ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವಿನಿ ಅನಂತಪುರ  ಅವರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಅಮಾನತು ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ಕೆಪಿಎಸ್​ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರೊ ಆಡಿಯೋ, ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಲಕ್ಷ್ಮಣ್ ಬಹಿರಂಗಗೊಳಿಸಿದ್ದರು. ಪ್ರಕರಣವನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

12 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

12 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

13 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

14 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

15 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

15 hours ago