ಒಟ್ಟು 31. 8 ಕೋಟಿ ರೂ. ಸಂಗ್ರಹ,2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ
ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ.
ಖರ್ಚು ವೆಚ್ಚದ ವಿವರಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳ ದಸರಾ ಉತ್ಸವ ಆಚರಣೆಗೆ ಒಟ್ಟು 31ಕೋಟಿ 8 ಲಕ್ಷ ಹಣ ಸಂಗ್ರಹವಾಗಿತ್ತು. ಇದರಲ್ಲಿ 28 ಕೋಟಿ 74 ಲಕ್ಷ ರೂಪಾಯಿ ವೆಚ್ಚವಾಗಿದೆ. ಒಟ್ಟು 2 ಕೋಟಿ 34 ಲಕ್ಷ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.
ಮಂಡ್ಯ, ಚಾಮರಾಜ ನಗರ, ಹಾಸನ ಜಿಲ್ಲೆಗೆ ಬಿಡುಗಡೆಯಾದ ಅನುದಾನ ಕೂಡ ಇದರಲ್ಲಿ ಸೇರಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಒಟ್ಟು ಖರ್ಚು 26 ಕೋಟಿ 54 ಲಕ್ಷದ 49 ಸಾವಿರದ 58 ರೂ, ಮಂಡ್ಯ, ಚಾಮರಾಜನಗರ ಮತ್ತು ಹಾಸನ ದಸರಾ ಆಚರಣೆಗೆ ಒಟ್ಟು 2 ಕೋಟಿ 20 ಲಕ್ಷ ಖರ್ಚಾಗಿದೆ ಎಂದವರು ತಿಳಿಸಿದರು.
ಮೈಸೂರಿನ ರಾಜಮನೆತನಕ್ಕೆ 47 ಲಕ್ಷ ರು. ಗೌರವಧನ ನೀಡಲಾಗಿದೆ. ಯುವದಸರಾ ಹಾಗೂ ಯುವ ಸಂಭ್ರಮಕ್ಕೆ 6 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸಚಿವರು ವಿವರ ನೀಡಿದರು.
ಮೂಡಾದಿಂದ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ, ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ, ಪ್ರಾಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಮಾರಾಟದಿಂದ 76 ಲಕ್ಷ ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ 88 ಸಾವಿರದ 819 ರೂ. ಸಂಗ್ರಹವಾಗಿದೆ.
ಮೈಸೂರಿನ ದಸರಾ ಖರ್ಚು ವೆಚ್ಚಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…