ಮೈಸೂರು ವಿವಿ ವ್ಯಾಪ್ತಿಯ ಹಾಸ್ಟೆಲ್‌ಗಳು ಕೋವಿಡ್‌ ಕೇಂದ್ರಗಳಾಗಿ ಪರಿವರ್ತನೆ

ಮೈಸೂರು: ಮೈಸೂರು ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ವಿವಿಧ ಹಾಸ್ಟೆಲ್‌ಗಳನ್ನು ಕೋವಿಡ್‌ ಆರೈಕೆ ಕೇಂದ್ರಗಳನ್ನಾಗಿ ಮಾರ್ಪಾಡು ಮಾಡಲು ನಿರ್ಧರಿಸಿದ್ದು, ಈ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳು ತಕ್ಷಣವೇ ಖಾಲಿ ಮಾಡುವಂತೆ ಕೋರಿದೆ.

ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ ನಂತರವಷ್ಟೇ ಶೈಕ್ಷಣಿಕ ಕೇಂದ್ರಗಳನ್ನು ಆರಂಭಿಸುವ ಕಾರಣದಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಸಹ ಹಾಸ್ಟೆಲ್‌ಗಳನ್ನು ಕೋವಿಡ್‌ ಆರೈಕೆ ಕೇಂದ್ರಗಳನ್ನಾಗಿ ಪರಿವರ್ತಿಸಲು ಮೈಸೂರು ವಿವಿ ನಿರ್ಧರಿಸಿದೆ.

ಕಳೆದ ವರ್ಷವೂ ವಿವಿ ಆಡಳಿತ ಮಂಡಳಿಯು ಹಾಸ್ಟೆಲ್‌ಗಳನ್ನು ಕೋವಿಡ್‌ ಆರೈಕೆ ಕೇಂದ್ರಗಳಾಗಿ ಪರಿವರ್ತಿಸಿತ್ತು. ವೀಕೆಂಡ್‌ ಕರ್ಫ್ಯೂ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿ ನಿರ್ದೇಶನವು ನುಂಗಲಾರದ ತುತ್ತಾಗಿದೆ.

× Chat with us