ನಾಳೆಯಿಂದ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತ

ಮೈಸೂರು: ಕೋವಿಡ್‌ ಪ್ರಕರಣಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅನ್‌ಲಾಕ್‌ ಘೋಷಿಸಲಾಗಿದ್ದು, ನಾಳೆಯಿಂದ (ಜುಲೈ 5) ಮೈಸೂರು ಮೃಗಾಲಯ ಹಾಗೂ ಕಾರಂಜಿ ಕೆರೆಯನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು.

mysore zoo

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಚಾಮರಾಜೇಂದ್ರ ಮೃಗಾಲಯವು, ʻಕೋವಿಡ್‌ ಕಾರಣದಿಂದಾಗಿ ಮೃಗಾಲಯ ಹಾಗೂ ಕಾರಂಜಿ ಕೆರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈಗ ಅನ್‌ಲಾಕ್‌ ಘೋಷಿಸಲಾಗಿದ್ದು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.

× Chat with us