Mysore
22
haze

Social Media

ಭಾನುವಾರ, 25 ಜನವರಿ 2026
Light
Dark

ಮೈಸೂರು : ಬೆಳ್ಳಂಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟ: 10 ಮಂದಿಗೆ ಗಾಯ

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡ ಘಟನೆ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. ಈ ಪೈಕಿ 6 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಪಕ್ಕದ ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದಿಂದ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದ್ದು ಭಾರಿ ಹಾನಿಯಾಗಿದೆ. ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!