Mysore
14
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಲೋಕಸಮರ 2024: ಮೈಸೂರಲ್ಲಿ ಮತ ಎಣಿಕೆ ಆರಂಭ

ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನಲೆ ಮೈಸೂರಿನಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಯಿತು.

ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ನೇತೃತ್ವದಲ್ಲಿ ಹಾಗೂ ಮತ ಎಣಿಕೆ ವೀಕ್ಷಕರಾದ ಮೊಹಮೊದ್ ಇಜಾಜ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಯಿತು.

ಸ್ಟ್ರಾಂಗ್ ರೂಂ ನಂಬರ್ 1 ಹುಣಸೂರು 212 ಓಪನ್ ಮಾಡಲಾಗಿದ್ದು, ಮೊದಲು ಅಂಚೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪರ್ಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಕಣದಲ್ಲಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಮೈಸೂರು ಕ್ಷೇತ್ರವು ಒಂದಾಗಿದ್ದು, ಮತದಾರ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಸಂಜೆ ವರೆಗೆ ಕಾದು ನೋಡಬೇಕಿದೆ.

Tags:
error: Content is protected !!