ಬೆಂಗಳೂರು : ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಚರ್ಚೆ ಆಗಾಗ್ಗೆ ಮುನ್ನೆಲೆಗೆ ಬರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರಲ್ಲಿ ಯಾರು ಸಿಎಂ ಎಂಬ ಚರ್ಚೆಯಿದೆ. ಈಗ ಸಿಎಂ ರೇಸ್‌ಗೆ ಡಾ.ಜಿ.ಪರಮೇಶ್ವರ್ ಹೆಸರು ಸೇರ್ಪಡೆಯಾಗುತ್ತಿದೆ.
ಹೈಕಮಾಂಡ್ ಸೇರಿದಂತೆ ‘ಕೈ’ ನಾಯಕರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ನೇರವಾಗಿ ಅಥವಾ ಪರೋಕ್ಷವಾಗಿಯಾದರೂ ಇಂಗಿತ ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ಸಹಜವಾಗಿ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗುವ ಕನಸನ್ನು ಬಹಿರಂಗಪಡಿಸಿದ್ದಾರೆ.