BREAKING NEWS

‘ನಾಡದೇವತೆ ಭುವನೇಶ್ವರಿ ಭವನ’ ಬೃಹತ್ ಸಭಾಂಗಣ ಸದ್ಯದಲ್ಲೇ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರವು ‘ನಾಡದೇವತೆ ಭುವನೇಶ್ವರಿ ಭವನ’ ಎಂಬ ಬೃಹತ್ ಸಭಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಅವರು ನಿನ್ನೆ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಪರೋಪಕಾರಿ ಚಾರ್ಮಾಡಿ ಹಸನಬ್ಬ ಸೇರಿದಂತೆ 68 ಸಾಧಕರಿಗೆ ಹಾಗೂ 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ವಿತರಿಸಿ ಮಾತನಾಡಿದರು. ಕನ್ನಡ ಭಾಷೆ ಮಾತನಾಡುವ ಅನಿವಾರ್ಯ ವಾತಾವರಣ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದರು.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಕಳೆದರೂ ಅದನ್ನು ಆಚರಿಸದೇ ಇರುವುದು ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯತನ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ ಅವರು, ಇದು ಬಿಜೆಪಿ ಮಾಡಿದ ಲೋಪ ಎಂದರು.

ನಾವು ‘ಕರ್ನಾಟಕ ಸಂಭ್ರಮ 50’ ನ್ನು ಘೋಷಿಸಿದ್ದೇವೆ, ಇದು ರಾಜ್ಯವನ್ನು ಕರ್ನಾಟಕ ಎಂದು ಮರು ನಾಮಕರಣಗೊಳಿಸಿ 50 ವರ್ಷಗಳು ಸಂದ ಸಂದರ್ಭದಲ್ಲಿ ಆಚರಿಸುವ ಒಂದು ವರ್ಷದ ಕಾರ್ಯಕ್ರಮವಾಗಿದೆ. ರಾಜ್ಯದ ಇತಿಹಾಸ, ಅದರ ವೈಭವ, ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಕಾರ್ಯಕ್ರಮಗಳು ನಾಳೆಯಿಂದ ಒಂದು ವರ್ಷ ರಾಜ್ಯಾದ್ಯಂತ ನಡೆಯಲಿದೆ ಎಂದರು.

ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುವ ಸಮಿತಿಗೆ 2,655 ಅರ್ಜಿಗಳು ಬಂದಿದ್ದು, ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದಕ್ಕಾಗಿ ಶ್ಲಾಘಿಸಿದರು. ಅಧಿಕಾರದಲ್ಲಿರುವವರ ಅಭಿಲಾಷೆಗಳಿಗೆ ಅನುಗುಣವಾಗಿ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಸೇರಿಸುವ ನಿದರ್ಶನಗಳಿವೆ. ಆದರೆ ನಾವು ಆ ಅಭ್ಯಾಸಗಳನ್ನು ದೂರವಿಟ್ಟಿದ್ದೇವೆ ಎಂದ ಮುಖ್ಯಮಂತ್ರಿಗಳು ಶಾಲಾ ಪಠ್ಯಕ್ರಮದ ಭಾಗವಾಗಿ ‘ವಚನ’ಗಳನ್ನು ಪರಿಚಯಿಸುವಂತೆ ನಿಜಗುಣಾನಂದ ಸ್ವಾಮಿಗಳ ಸಲಹೆಗೆ ಉತ್ತರಿಸಿದ ಅವರು, ಸರ್ಕಾರ ಅದನ್ನು ಪರಿಗಣಿಸುತ್ತದೆ ಎಂದು ಹೇಳಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago