BREAKING NEWS

ನಾಡಹಬ್ಬ ದಸರಾವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದಸರಾ ಹಬ್ಬವನ್ನು ದಿನಾಂಕ 15.10.2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ವಿಶಿಷ್ಟ ದೀಪಾಲಂಕಾರ : ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ : ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.

ವಸ್ತು ಪ್ರದರ್ಶನ : ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ : ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಪ್ರವಾಸೋದ್ಯಮಕ್ಕೆ ಒತ್ತು: ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ.

ಏರ್ ಶೋ : ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

· ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.

· ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

· ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು

· ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್,ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago