BREAKING NEWS

ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ : ರಾಜ್ಯ ಬಿಜೆಪಿ ಸ್ಪಷ್ಟನೆ

ಬಳ್ಳಾರಿ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಬಳ್ಳಾರಿಯಲ್ಲಿ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಇದೀಗ ಮಾಧ್ಯಮ ಪ್ರಕಟಣೆ ನೀಡಿ ಅಲ್ಲಿ ತಾವು ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಮಾಧ್ಯಮಗಳ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಏನಿದು ಗೊಂದಲ? : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡರೂ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಾಜಿನಾಮೆ ಸಲ್ಲಿಸಿರಲಿಲ್ಲ. ಈಗ ಹೊಸಬರ ನೇಮಕ ಖಚಿತವಾಗುತ್ತೆ, ಇವರನ್ನು ಕಿತ್ತು ಹಾಕುತ್ತಾರೆ ಎನ್ನುವಾಗ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡಿದೆ. ಇದಕ್ಕೆ ಇಂಬು ನೀಡುವಂತೆ ಸ್ವತಃ ನಳೀನ್ ಕುಮಾರ್ ಕಟೀಲ್ ಅವರೇ ಬಳ್ಳಾರಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಈ ಕುರಿತ ಸುದ್ದಿಗಳು ವ್ಯಾಪಕವಾದಂತೆಯೇ ಈ ಬಗ್ಗೆ ರಾಜ್ಯ ಬಿಜೆಪಿ ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದೆ. ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ‘ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಈ ಕುರಿತ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕಟೀಲ್ ತಿಳಿಸಿದ್ದಾರೆ. ಸೋಮಣ್ಣ ರಾಜ್ಯಾಧ್ಯಕ್ಷ ಆಕಾಂಕ್ಷೆ ಪ್ರಕಟಿಸಿದ ಕುರಿತು ಕೇಳಿದ ಪ್ರಶ್ನೆಗೆ ಅವರು ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕುರಿತು ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದರು.

ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕಟೀಲ್ ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

lokesh

Recent Posts

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

49 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

6 hours ago