ನಟ ದರ್ಶನ್‌ ಸಂಬಂಧಿಸಿದ ಕೊಲೆ ಕೇಸ್‌ನಲ್ಲಿ ರಾಜಕಾರಣಿಗಳ ಹೆಸರು ಕಂಡುಬಂದಿಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು : ನಟ ದರ್ಶನ್‌ಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ ಎಂದರು.

ನಟ ದರ್ಶನ್‌ಗಾಗಲಿ, ಪರಮೇಶ್ವರ್‌ಗಾಗಲಿ ಎಲ್ಲರಿಗೂ ಕಾನೂನು ಒಂದೆ. ಕೊಲೆಯಾದ ರೇಣುಕಾಸ್ವಾಮಿ ದರ್ಶನ್‌ ಅವರ ಶ್ರೀಮತಿ ಬಗ್ಗೆ ಪೋಸ್ಟ್‌ ಮಾಡಿದ್ದ ಎಂದು ಹೇಳಲಾಗಿದೆ. ಹಾಗಿದ್ದರೆ ಪೊಲೀಸರಿಗೆ ದೂರು ನೀಡಬೇಕಾಗಿತ್ತು. ಯಾರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು.

ಈ ಪ್ರಕರಣದಲ್ಲಿ ಸರ್ಕಾರದ ವತಿಯಿಂದ ಯಾರು ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವಿಚಾರದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದಿದ್ದಾರೆ.