ತಿರುವನಂತಪುರ : ಗುಜರಾತ್‌ನ ‘ಅಮುಲ್’ ಉತ್ಪನ್ನಗಳ ಮಾರಾಟ– ಪ್ರಚಾರಕ್ಕೆ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಎದುರಾಗಿರುವ ನಡುವೆ, ನಂದಿನಿ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದಲ್ಲಿ ಮಳಿಗೆಗಳನ್ನು ತೆರೆಯುತ್ತಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ಧಾರಕ್ಕೆ ಮಿಲ್ಮಾ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸುವ ಕೇರಳ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (ಕೆಎಂಎಂಎಫ್) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಮಿಲ್ಮಾ ಅಧ್ಯಕ್ಷ ಕೆ.ಎಸ್. ಮಣಿ ಅವರು, ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟದ ಅಮುಲ್ ಉತ್ಪನ್ನಗಳು ಕರ್ನಾಟಕ ಪ್ರವೇಶಿಸುವುದಕ್ಕೆ ಆಕ್ಷೇಪಿಸುವ ಕೆಎಂಎಫ್, ಇದೇ ಸಮಯದಲ್ಲಿ ಕೇರಳದಲ್ಲಿ ನಂದಿನಿ ಮಳಿಗೆಗಳನ್ನು ತೆರೆಯುತ್ತಿರುವ ನಿಲುವನ್ನು ಪ್ರಶ್ನಿಸಿದ್ದಾರೆ.
ಕಳೆದ ಕೆಲವು ತಿಂಗಳಿಂದ ಕೇರಳದ ಮಲಪ್ಪುರಂನ ಮಂಜೇರಿಯಲ್ಲಿ ಮತ್ತು ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಂದಿನಿಯ ಎರಡು ಮಳಿಗೆಗಳನ್ನು ತೆರೆಯಲಾಗಿದೆ. ಅಲ್ಲದೇ ಕೇರಳದಲ್ಲಿ ಸುಮಾರು 100 ಫ್ರಾಂಚೈಸಿಗಳಿಗಾಗಿ ಕೆಎಂಎಫ್ ಅರ್ಜಿಗಳನ್ನು ಆಹ್ವಾನಿಸಿದೆ.
ಕೇರಳದಲ್ಲಿ ನಂದಿನಿ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಈಗಾಗಲೇ ಕೆಎಂಎಫ್ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಆದರೆ, ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಣಿ ತಿಳಿಸಿದರು.
‘ಕೇರಳದಲ್ಲಿ ಹೆಚ್ಚುವರಿ ಹಾಲು ಇದ್ದಾಗಲೂ ಇತರ ರಾಜ್ಯಗಳಿಗೆ ಮಿಲ್ಮಾ ಕಾಲಿಡಲಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಕೆಎಂಎಫ್ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ನಿರ್ಧಾರವು ಅನೈತಿಕ ಮತ್ತು ಸಹಕಾರಿ ತತ್ವಗಳಿಗೆ ವಿರುದ್ಧವಾಗಿದೆ. ಇದು ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ’ ಎಂದು ಮಣಿ ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…