BREAKING NEWS

ನರಸೀಪುರ : ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯದಿಂದ ತಲಾ 2 ಲಕ್ಷ ರೂ. ಪರಿಹಾರ

ಮೈಸೂರು : ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯ ಪರಿಹಾರ ಘೋಷಣೆ ಮಾಡಿದೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ. ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಪ್ರಧಾನಿ ನರೇಂದ್ರ ಮೋದಿ “ದುರ್ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಅಗಲಿದ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್​ ಮಾಡಿದ್ದಾರೆ.

ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದ ಸಿಎಂ ಸಿದ್ದರಾಮಯ್ಯ :ಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದರು. ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದರು.

ಮೃತಪಟ್ಟವರು ಯಾರೆಲ್ಲ?  : ಬಿಳ್ಯಾಳ ಮಂಜುನಾಥ್ (35), ಇವರ ಪತ್ನಿ ಪೂರ್ಣಿಮಾ (30), ಮಗ ಪವನ (10), ಕಾರ್ತಿಕ (08), ಸಂದೀಪ (24), ತಾಯಿ ಸುಜಾತ ( 40), ತಂದೆ ಕೊಟ್ರೇಶ್ (45), ಪತ್ನಿ ಗಾಯತ್ರಿ (35), ಮಗಳು ಶ್ರಾವ್ಯ ( 03) ಹಾಗೂ ಇನೋವಾ ಚಾಲಕ ಮೈಸೂರಿನ ಆದಿತ್ಯ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರಗೆ ರವಾನಿಸಲು ಸಿದ್ಧತೆ ಮಾಡಲಾಗುತ್ತಿದೆ. ಸದ್ಯ ಚಾಮರಾಜನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದರು. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

lokesh

Recent Posts

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 seconds ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

8 mins ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

33 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

37 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

40 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

43 mins ago