BREAKING NEWS

ಎಲ್ಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್‌’ ಉಲ್ಲೇಖಿಸಲು ಎನ್‌ಸಿಇಆರ್‌ಟಿ ಸಮಿತಿಯ ಶಿಫಾರಸು

ನವದೆಹಲಿ : ನ್ಯಾಷನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಎಂಡ್‌ ಟ್ರೈನಿಂಗ್‌ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್‌ ಗ್ರೂಪ್)‌ ಎಲ್ಲಾ ಎನ್‌ಸಿಆರ್‌ಟಿ ಪಠ್ಯಪುಸ್ತಕಗಳಲ್ಲಿ “ಇಂಡಿಯಾ” ಬದಲು “ಭಾರತ” ಎಂದು ಉಲ್ಲೇಖಿಸಬೇಕೆಂದು ಸಲಹೆ ನೀಡಿದೆ.

ಈ ಸಲಹೆಯನ್ನು 2022 ಸೋಶಿಯಲ್‌ ಸಾಯನ್ಸ್‌ ಸಮಿತಿ ಮಾಡಿದೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಿಂದ ಅದನ್ನು ಜಾರಿಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷ, ನಿವೃತ್ತ ಪ್ರೊಫೆಸರ್ ಸಿ ಎಲ್‌ ಐಸಾಕ್‌ ಹೇಳಿದ್ದಾರೆ. ಐಸಾಕ್‌ ಅವರು ಇತಿಹಾಸಕಾರ ಮತ್ತು ಪದ್ಮ ಶ್ರೀ ಪುರಸ್ಕೃತರಾಗಿದ್ದಾರೆ.

ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ‘ಭಾರತ್’ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಈ ಸಮಿತಿಯ ಸದಸ್ಯರಲ್ಲಿ ಗಾಯಕ ಶಂಕರ್‌ ಮಹದೇವ, ಇನ್ಫೋಸಿಸ್‌ ಫೌಂಡೇಶನ್‌ನ ಸುಧಾ ಮೂರ್ತಿ, ಆರೆಸ್ಸೆಸ್‌ ಸಂಯೋಜಿತ ಸಂಸ್ಕೃತ ಭಾರತಿಯ ಚಮು ಕೃಷ್ಣ ಶಾಸ್ತ್ರಿ, ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್‌ ದೆಬ್ರಾಯ್‌ ಮುಂತಾದವರು ಇದ್ದಾರೆ.

ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್‌ ಆಫ್‌ ಇಂಡಿಯಾ ಬದಲು ಪ್ರೆಸಿಡೆಂಟ್‌ ಆಫ್‌ ಭಾರತ್‌ ಎಂದು ಬರೆದಿರುವುದು, ದೇಶದ ಹೆಸರಿನ ಬದಲಾವಣೆ ಮಾಡಲಾಗುವುದೇ ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

8 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

36 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago