ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ. ನವೆಂಬರ್ 12ರಂದು ಸುರಂಗ ಕುಸಿತ ಸಂಭವಿಸಿತ್ತು. ಬರೋಬ್ಬರಿ 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಿಸಿದೆ.
ಕಾರ್ಮಿಕರು ಸಿಲುಕಿದ್ದ ಸ್ಥಳಕ್ಕೆ ಪೈಪ್ ಅಳವಡಿಸಿ ಎಲ್ಲಾ 41 ಕಾರ್ಮಿಕರನ್ನು ಹಗ್ಗಕ್ಕೆ ಸ್ಟ್ರೆಚರ್ ಕಟ್ಟಿ ಪೈಪ್ ಮುಖಾಂತರ ಹೊರತೆಗೆಯುವಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿದೆ. ಈ ಮೂಲಕ ಹಲವು ದಿನಗಳಿಂದ ಕಾರ್ಮಿಕರ ಕುಟುಂಬಸ್ಥರು ಹಾಗೂ ಅನೇಕ ಜನರ ಪ್ರಾರ್ಥನೆ ಫಲಿಸಿದೆ.
ಇನ್ನು ಸುರಂಗದಿಂದ ಹೊರತಂದ ಕಾರ್ಮಿಕರನ್ನು ಆಮ್ಲಜನಕ ಸೌಲಭ್ಯವುಳ್ಳ ಆಂಬುಲೆನ್ಸ್ ಮೂಲಕ 30 ಕಿಲೋಮೀಟರ್ ದೂರದಲ್ಲಿರುವ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಕೇಂದ್ರಕ್ಕೆ ಸಾಗಿಸಲಾಗಿದ್ದು ಅಲ್ಲಿ ಎಲ್ಲಾ ಕಾರ್ಮಿಕರಿಗೂ ಆಮ್ಲಜನಕ ಬೆಂಬಲಿತ ಬೆಡ್‌ಗಳುಳ್ಳ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…
ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…
ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…
ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…