ಎಂಇಎಸ್ ರಾಜಕೀಯ ಪಕ್ಷ, ನಿಷೇಧದ ಬಗ್ಗೆ ಪರಾಮರ್ಶೆ ನಡೆಸಬೇಕು: ಪ್ರಹ್ಲಾದ್ ಜೋಷಿ

ಹೊಸದಿಲ್ಲಿ : ಎಂಇಎಸ್ ಈಗಾಗಲೇ ರಾಜಕೀಯ ಪಕ್ಷವಾಗಿ ನೋಂದಣಿಯಾಗಿದೆ. ಹೀಗಾಗಿ ಕಾನೂನಾತ್ಮಕವಾಗಿ ನಿಷೇಧಿಸುವ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಎಂಇಎಸ್ ಒಂದು ರಾಜಕೀಯ ಪಕ್ಷವಾಗಿದೆ. ಅದನ್ನು ನಿಷೇಧಿಸಲು ಒಂದು ಕಾನೂನು ಇದೆ. ಪುಂಡರ ಮೇಲೆ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಹೀಗಾಗಿ ಪ್ರತಿಭಟನೆ, ಬಂದ್ ಮಾಡದಂತೆ ಬೆಳಗಾವಿಯಲ್ಲಿ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಎಂಇಎಸ್ ಪುಂಡರು ಬೆಳಗಾವಿಯಲ್ಲಿ ಅಟ್ಟಹಾಸ ಮೆರೆದಿರುವ ಸರಿಯಲ್ಲ. ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವುದು ಖಂಡನೀಯ. ಕೃತ್ಯವೆಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗಿದೆ. ಮತ್ತೊಮ್ಮೆ ಇಂತಹ ಕೃತ್ಯವೆಸಗದಂತೆ ಕ್ರಮ ಕೈಗೊಳ್ಳಬೇಕು. ಇನ್ನು ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ಖಂಡನೀಯ. ಮೊಘಲರ ವಿರುದ್ಧ ಶಿವಾಜಿ ಹೋರಾಡಿದ್ದರು ಎಂದು ಅವರು ಹೇಳಿದ್ದಾರೆ.

ಈ ಘಟನೆಯ ಹಿಂದೆ ಬಿಜೆಪಿ, ಕಾಂಗ್ರೆಸ್‌ನವರು ಇದ್ದಾರೆಂದು ಹೇಳಲಾಗಲ್ಲ. ರಾಜಕೀಯ ಉದ್ದೇಶಕ್ಕಾಗಿ ಕೆಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸಮರ್ಥವಾಗಿದ್ದು, ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಜೋಶಿ ತಿಳಿಸಿದ್ದಾರೆ.

× Chat with us