ಶಿವಮೊಗ್ಗ: ಲವ್ ಜಿಹಾದ್ ಹೆಸರಿನಲ್ಲಿ ಹತ್ಯೆಯಾದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹೀರೆಮಠ್ ಅವರ ಹತ್ಯೆ ಪ್ರಕರಣವನ್ನು ಸಿಐಡಿ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕಿ ನೇಹಾ ಸಾವಿಗೆ ಸೂಕ್ತ ಮತ್ತು ತ್ವರಿತ ಗತಿಯಲ್ಲಿ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಈ ಪ್ರಕರಣವನ್ನು ವಿಶೇಷ ನ್ಯಾಯಲಯಕ್ಕೆ ವಹಿಸಿಕೊಡುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಪ್ರಕರಣಗಳು ನಡೆದಿವೆ. ನಮ್ಮ ಅವಧಿಯಲ್ಲಿ ಈವರೆಗೆ ಕಡಿಮೆ ಪ್ರಕರಣಗಳು ನಡೆದಿವೆ. ಕಾಂಗ್ರೆಸ್ ಸರ್ಕಾರ ರಾಜ್ಯಾದ್ಯಂತ ಎಲ್ಲರಿಗೂ ರಕ್ಷಣೆ ನೀಡುತ್ತಾ ಬಂದಿದೆ ಎಂದು ತಿಳಿಸಿದರು.