ಬೆಂಗಳೂರು : ಈ ತಿಂಗಳ ಅಂತ್ಯದೊಳಗೆ ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‍ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2,95,986 ಹೊಸ ಪಡಿತರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ಸ್ಥಳ ಪರಿಶೀಲಿಸಿ ಅರ್ಹರಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 25 ಲಕ್ಷ ಬಿಪಿಎಲ್ ಕುಟುಂಬದವರಿಗೆ ಪಡಿತರ ವಿತರಿಸಲಾಗುತ್ತಿದೆ. ಪಡಿತರ ಕಾರ್ಡ್ ಹೊಂದಿದ್ದರೂ ಹಲವು ತಿಂಗಳುಗಳಿಂದ ಪಡಿತರ ಪಡೆಯದವರ ಬಗ್ಗೆಯೂ ತನಿಖೆ ನಡೆಸಲಾಗುವುದು. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಡಿತರ ಚೀಟಿಯಲ್ಲಿರುವ ಮೃತರ ಹೆಸರು ತೆಗೆಯಲು, ಕುಟುಂಬ ಸದಸ್ಯರನ್ನು ಸೇರಿಸಿಕೊಳ್ಳುವುದು ಸೇರಿದಂತೆ ಅಗತ್ಯ ತಿದ್ದುಪಡಿಗಾಗಿ ಒಂದು ತಿಂಗಳು ಅವಕಾಶ ನೀಡಲಾಗಿದೆ. ಇದರಿಂದಾಗಿ ಹೊಸ ಕಾರ್ಡ್‍ಗಳನ್ನು ನೀಡಲು ಅಧಿಕಾರಿಗಳು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದರು.
ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ ಕುಟುಂಬಗಳಲ್ಲಿ 4.42. ಕೋಟಿ ಫಲಾನುಭವಿಗಳು ಇದ್ದಾರೆ. ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ.ಉಳಿದಂತೆ 28 ಲಕ್ಷ ಕುಟುಂಬಗಳಲ್ಲಿ ಕಳೆದ 3 ತಿಂಗಳಲ್ಲಿ ಒಂದೂ ತಿಂಗಳು ಪಡಿತರ ಪಡೆದಿಲ್ಲ. 5,32,349 ಫಲಾನುಭವಿಗಳಿ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರು ಇದ್ದಾರೆ. 3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ. 19,27,225 ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ. ಇವರಿಗೆ ಹಣ ಖಾತೆಗೆ ಹಾಕಿಲ್ಲ ಎಂದು ಮಾಹಿತಿ ನೀಡಿದರು.
ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಅಕ್ಕಿ ಕೊಡೋಕೆ ಈಗ ಮುಂದೆ ಬಂದಿದೆ. 34 ರೂ. ಮೇಲೆ ಹೆಚ್ಚು ಹಣ ಕೊಡಲು ಆಗುವುದಿಲ್ಲ ಎಂದು ಹೇಳಿದ್ದೇವೆ. ಎರಡು ರಾಜ್ಯಗಳ ಜೊತೆ ಮಾತಾಡುತ್ತಿದ್ದೇವೆ. ಸೆಪ್ಟೆಂಬರ್ ನಲ್ಲಿ ಅಕ್ಕಿ ಕೊಡೋ ಚಿಂತನೆ ಮಾಡಿದ್ದೇವೆ. ಹೆಚ್ಚು ದಿನ ಹಣ ಕೊಡೊಲ್ಲ. ನಾಫೆಡ್, ಕೇಂದ್ರೀಯ ಭಂಡಾರದಿಂದ ಅಕ್ಕಿ ಪಡೆಯೋ ಪ್ರಕ್ರಿಯೆ ನಡೆಸುತ್ತೇವೆ. ಆದಷ್ಟು ಬೇಗ ಅಕ್ಕಿ ಕೊಡುತ್ತೇವೆ ಎಂದರು.
ಹೊಸ ಪಡಿತರ ಚೀಟಿಗೆ ಜುಲೈ ಅಂತ್ಯಕ್ಕೆ 2,95,986 ಅರ್ಜಿ ಬಂದಿವೆ. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕಾರ್ಡ್ ನೀಡುವ ಪ್ರಕ್ರಿಯೆ ನಿಂತಿತ್ತು. ಈಗ ಫಲಾನುಭವಿಗಳ ಮಾಹಿತಿಯನ್ನ ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆ ಅನುಮತಿ ಪಡೆದು ಕಾರ್ಡ್ ವಿವರಣೆ ಮಾಡಲಾಗುವುದು. ಬ್ಯಾಂಕ್ ಅಕೌಂಟ್ ಇಲ್ಲದ 28 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆ ಮಾಡಿಸಿದ ಬಳಿಕವೇ ಹಣ ಹಾಕಲಾಗವುದು ಎಂದು ಹೇಳಿದರು.
ಅಕ್ಕಿ ಜೊತೆ ರಾಗಿ ಮತ್ತು ಜೋಳ ಕೊಡಲು ಸರ್ಕಾರ ಚಿಂತನೆ ಮಾಡಿದೆ. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಂದ ರಾಗಿ, ಬಿಳಿ ಖರೀದಿಗೆ ಸರ್ಕಾರದ ನಿರ್ಧಾರ ಮಾಡಿದೆ. 8 ಲಕ್ಷ ಟನ್ ರಾಗಿ, 3 ಲಕ್ಷ ಜೋಳ ಖರೀದಿ ಮಾಡ್ತೀವಿ. ಅಕ್ಕಿ ಜೊತೆ ಜೋಳ,ರಾಗಿ ಕೂಡಾ ಪಡಿತರದಲ್ಲಿ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದರು.
ನೆರೆಯ ಆಂಧ್ರಪ್ರದೇಶದಲ್ಲಿರುವಂತೆ ಪಡಿತರ ಪಡೆಯುವವರಿಗೆ ಎ ಕಾರ್ಡ್, ವೈದ್ಯಕೀಯ ಸೇವೆಗಾಗಿ ಪಡಿತರ ಹೊಂದಿರುವವರಿಗೆ ಬಿ ಕಾರ್ಡ್ ನೀಡಲು ಚಿಂತನೆ ನಡೆಸಿದ್ದೇವೆ. ಅದರಂತೆ ನಮ್ಮ ಅಕಾರಿಗಳನ್ನು ಅಲ್ಲಿಗೆ ಕಳುಹಿಸಿ ಅಧ್ಯಯನ ಮಾಡಿ ವರದಿ ಬಂದ ನಂತರ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈವರೆಗೆ ಆಧಾರ್ ಜೋಡಣೆ ಮಾಡಿಕೊಂಡಿರುವ 19,27,226 ಕಾರ್ಡ್‍ಗಳ ಪರಿಶೀಲನೆ ನಡೆದಿದೆ. ನ್ಯಾಯಬೆಲೆ ಅಂಗಡಿಗಳನ್ನು ವಿಂಗಡಿಸಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 5 ಸಾವಿರ, ಜೋಳಕ್ಕೆ 4.5 ಸಾವಿರ ರೂ. ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಡಿತರ ವ್ಯವಸ್ಥೆಯಲ್ಲಿ 8 ಲಕ್ಷ ಟನ್ ರಾಗಿ ಹಾಗೂ 3 ಲಕ್ಷ ಟನ್ ಜೋಳ ಖರೀದಿಸಲು ಚಿಂತಿಸಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ 14 ಲಕ್ಷ ಬಿಪಿಎಲ್ ಕುಟುಂಬದವರಿಗೆ 20 ಸಾವಿರ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರಿ ಸ್ವಾಮ್ಯದಿಂದ ಪಡೆದು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕಳೆದ ಮೂರು ತಿಂಗಳಿನಿಂದ ಪಡಿತರ ಪಡೆಯದ 5,32,349 ಲಕ್ಷ ಅಂತ್ಯೋದಯ ಪಡಿತರದಾರರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಇದರಲ್ಲಿ ಮೂವರು ಸದಸ್ಯರಿರುವ ಫಲಾನುಭವಿಗಳು 3,40,425 ಇದ್ದಾರೆ ಎಂದರು.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್ನಾಥ್ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…