ಲಂಡನ್: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ ಮುಂದಿನ ಅವರ ರಾಜಕೀಯ ಗುರಿಗಳ ಮೇಲೆ ನಿರ್ಧರಿಸಲಾಗಿದೆ.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಆರ್ಥಿಕ ವಿಷಯದಲ್ಲಿ ನಿಪುಣರು. ಮಾಜಿ ಪಿಎಂ ಬೋರಿಸ್ ಜಾನ್ಸನ್ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಸಂಧರ್ಭದಲ್ಲಿ ಕೋವಿಡ್ ಬಿಕ್ಕಟ್ಟಿನ ಸಮಸ್ಯೆಯಲ್ಲೂ ಬ್ರಿಟನ್ ಆರ್ಥಿಕತೆ ಪಾತಾಳಕ್ಕೆ ಕುಸಿಯದಂತೆ ಶಿಸ್ತು ಬದ್ಧತೆಯಿಂದ ಮಾಡಿದ ಕೆಲಸ ಅವರಿಗೀಗ ಪ್ರಧಾನಿ ಪಟ್ಟ ತಂದುಕೊಟ್ಟಿದೆ.
ತೆರಿಗೆ ಪದ್ಧತಿ, ವಿದ್ಯುತ್ ದರ ನೀತಿವಿಧಾನ, ಸೇರಿದಂತೆ ಹಲವು ಆರ್ಥಿಕ ಬಿಕ್ಕಟ್ಟುಗಳನ್ನು ನಿಭಾಯಿಸುವ ಹಾಗೂ ಸ್ವಪಕ್ಷೀಯರ ವಿರೋಧವನ್ನು ತಣಿಸುವ ಮೂಲಕ ಪಕ್ಷ ಹಾಗೂ ದೇಶವನ್ನು ಮುನ್ನಡೆಸುವ ಸವಾಲು ಅವರ ಮುಂದಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…