ನವದೆಹಲಿ : ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್‌ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ : ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…
ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಕಳೆದ…
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ…
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…