BREAKING NEWS

ಭಾರತದ ಮಾಜಿ ಕ್ರಿಕೆಟರ್‌ ಸಲೀಂ ದುರಾನಿ ನಿಧನ

ನವದೆಹಲಿ : ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್‌ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್‌ ಪಂದ್ಯಗಳನ್ನು ಆಡಿದ್ದರು.

‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ : ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

lokesh

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

1 hour ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

1 hour ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago