BREAKING NEWS

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ.

ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ.

ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ನೂತನ ಸಂಸತ್ತಿನ ಕಟ್ಟಡವನ್ನು ಪ್ರಧಾನ ಮಂತ್ರಿ ಉದ್ಘಾಟಿಸುವುದನ್ನು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ. 

andolanait

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

4 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

5 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

6 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

6 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

8 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

9 hours ago