ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ “ಶಕ್ತಿ” ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ.
‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು ಎಂದು ರೆಡ್ಡಿ ತಿಳಿಸಿದ್ದಾರೆ.
ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.
ಈ ಯೋಜನೆಯು ರಸ್ತೆ ಸಾರಿಗೆ ನಿಗಮಗಳಿಗೆ (ಆರ್‌ಟಿಸಿ) ಹೆಚ್ಚಿನ ಅಧಿಕಾರ ನೀಡಿದೆ ಎಂದು ರೆಡ್ಡಿ ಹೇಳಿದರು.
ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ. ಇದರಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಇದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಶಕ್ತಿಹೀನಗೊಳಿಸಿದೆ. ಯಾಕೆಂದರೆ ಅವರು ಮಹಿಳೆಯರನ್ನು ಬೆಂಬಲಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಹಯೋಜನೆಗೆ ಜೂನ್ 11 ರಂದು ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ, ಮತ್ತು 194,50,13,686 ರೂಪಾಯಿ ಮೌಲ್ಯದ ಟಿಕೆಟ್‌ಗಳನ್ನು ವಿತರಿಸಲಾಗಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…