ರಾಜ್ಯದ 7,500 ಸ್ತ್ರೀ ಶಕ್ತಿ ಗುಂಪುಗಳಿಗೆ ನೂತನ ಯೋಜನೆ

ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಅನುದಾನ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಹೊಸ ಯೋಜನೆಯೊಂದನ್ನು ಘೋಷಿಸಿದೆ. ಅಮೃತ ಯೋಜನೆಯಡಿ 7,500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 5,690 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಟ್ಟ ಕಡೆಯ ವ್ಯಕ್ತಿಗೂ ಅಂತರ್ಜಾಲ ಸೌಲಭ್ಯ ಕಲ್ಪಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.

× Chat with us