ಟಿ20: ಕಿವೀಸ್ ಬೌಲಿಂಗ್ ದಾಳಿಗೆ ನಲುಗಿದ ಪಾಕ್ ತಂಡಕ್ಕೆ ಆರಂಭಿಕ ಆಘಾತ

ಆಕ್ಲೆಂಡ್: ಪ್ರವಾಸಿ ಪಾಕಿಸ್ತಾನ ಹಾಗೂ ಅತಿಥೇಯ ನ್ಯೂಜಿ಼ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಆರಂಭಗೊಂಡಿದೆ.

ಮೂರು ಪಂದ್ಯಗಳ‌ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಪಾಕ್ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಹಾಗೂ ನಾಯಕ ಬಾಬರ್ ಆಜ಼ಂ ಅನುಪಸ್ಥಿತಿಯಲ್ಲಿ ಶಹಬಾದ್ ಖಾನ್ ಪಾಕಿಸ್ತಾನ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕೀವಿಸ್ ಪರ 26 ವರ್ಷದ ಯುವ ವೇಗದ ಬೌಲರ್ ಜೇಕಬ್ ಡಫಿ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.

ಅಲ್ಲದೇ ಮೊದಲ ಪಂದ್ಯದ ಮೊದಲ ಓವರ್‌ನಲ್ಲೇ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಡಫಿ, ಪಾಕಿಸ್ತಾನ ತಂಡದ ಆರಂಭಿಕರಾದ ರಿಜ್ವಾನ್(17), ಅಬ್ದುಲ್ಲಾ ಶಫಿಕ್(0) ಹಾಗೂ ಹಫೀಜ್(0) ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಮೇಲುಗೈ ತಂದುಕೊಡುವ ಜತೆಗೆ ಚೊಚ್ಚಲ ಪಂದ್ಯದಲ್ಲೇ ಮಾರಕ ಬೌಲಿಂಗ್ ದಾಳಿ ನಡೆಸಿದರು.

ಕಿವೀಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ 5 ಓವರ್‌ಗಳ ಅಂತ್ಯಕ್ಕೆ 25ಕ್ಕೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

× Chat with us