ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿರುವ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆಯಷ್ಟೇ ವೃಕ್ಷ ಮಾತೆಯವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ದತ್ತು ಪುತ್ರ ಬಳ್ಳೂರು ಗ್ರಾಮದ ಉಮೇಶ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಸೆ. 26 ರಂದು ಉಸಿರಾಟದಲ್ಲಿ ಏರು ಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಸೋಮವಾರ ರಾತ್ರಿ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಮಂಗಳವಾರ ಬೆಂಗಳೂರಿಗೆ ತೆರಳಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…