BREAKING NEWS

ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ನಿಧನ: ಅಂತಿಮ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ

ಹಾಸನ:  ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.

ಶ್ರವಣಬೆಳಗೊಳದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಾಲ್ಲೂಕಿನ ಆದಿಚುಂಚನಗಿರಿ ಅಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನ‌ ಪಡೆದ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶಾಸಕ ಸುರೇಶ್ ಗೌಡ.

andolanait

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

4 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

5 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

24 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago