Mysore
27
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್‌ ಕುಮಾರ್‌!

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. ಇದರೊಂದಿಗೆ ಆರ್‌ಜೆಡಿ-ಜೆಡಿಯು ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ.

ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್‌, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!