BREAKING NEWS

ರಾಜಕೀಯದ ಬಣ್ಣ ಬೇಡ : ಸಿಎಂ ಭೇಟಿ ಬಗ್ಗೆ ಸ್ಪಷ್ಟನೆ ಕೊಟ್ಟ ಡಿವೈನ್‌ ಸ್ಟಾರ್‌

ನಟ ಕಿಚ್ಚ ಸುದೀಪ್ ಅವರು ಈಚೆಗೆ ಬಹಿರಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಷ್ಟೇ ಅಲ್ಲ, ಸಿಎಂ ಬೊಮ್ಮಾಯಿ ಅವರು ಸೂಚಿಸುವ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೂ ಪ್ರಚಾರ ಮಾಡುವುದಾಗಿಯೂ ಸುದೀಪ್ ಹೇಳಿದ್ದರು. ಇದೀಗ ಮತ್ತೋರ್ವ ಸ್ಟಾರ್ ನಟ ರಿಷಬ್ ಶೆಟ್ಟಿ ಕೂಡ ಬಿಜೆಪಿ ಪರ ಪ್ರಚಾರ ಮಾಡುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಗುರುವಾರ (ಏ.13) ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಮತ್ತು ರಿಷಬ್‌ ಕೂಡ ಮುಖಾಮುಖಿ ಆಗಿದ್ದರು. ರಿಷಬ್ ಕೂಡ ಬಿಜೆಪಿ ಪರ ಪ್ರಚಾರ ಮಾಡ್ತಾರೆ ಅನ್ನೋ ಮಾತು ಜೋರಾಗಿ ಕೇಳಿಬಂದಿದೆ. ಇದೀಗ ಬಗ್ಗೆ ಸ್ಪಷ್ಟನೆ ನೀಡಿರುವ ರಿಷಬ್ ಶೆಟ್ಟಿ, ರಾಜಕೀಯದ ಬಣ್ಣ ಬೇಡ ಎಂದು ಹೇಳಿದ್ದಾರೆ.

ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಇರಲಿ : ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ನಟ ರಿಷಬ್‌ ಶೆಟ್ಟಿ ಗುರುವಾರ (ಏ.13) ಒಟ್ಟಿಗೆ ಕಾಣಿಸಿಕೊಂಡಿದ್ದರು. ಸಿಎಂ ಅವರನ್ನು ಭೇಟಿಯಾಗಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ರಿಷಬ್ ಶೆಟ್ಟಿ, ‘ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೋದಾಗ ಮಾನ್ಯ ಮುಖ್ಯಮಂತ್ರಿಗಳ ಭೇಟಿಯಾಯಿತು, ರಾಜಕೀಯದ ಬಣ್ಣ ಬೇಡ. ಕಾಂತಾರದ ಬರವಣಿಗೆಯಲ್ಲಿ ಸಂಪೂರ್ಣ ತೊಡಗಿಕೊಂಡಿದ್ದೇನೆ, ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಇರಲಿ..’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲಿಗೆ ತಮ್ಮ ಸಂಪೂರ್ಣ ಗಮನ ಕಾಂತಾರ 2 ಸಿನಿಮಾದ ಮೇಲಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ರಿಷಬ್ ಶೆಟ್ಟಿ.

lokesh

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

16 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

48 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago