BREAKING NEWS

ನಂದಿನಿ ಜೊತೆ ಸ್ಪರ್ಧೆಯಿಲ್ಲ : ಅಮುಲ್‌ ಎಂಡಿ ಜಯನ್‌ ಮೆಹ್ತಾ

ನವದೆಹಲಿ : ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸುತ್ತಿರುವುದು ನಂದಿನಿ ಬ್ರಾಂಡ್‌ನೊಂದಿಗೆ ಸ್ಪರ್ಧಿಸಲು ಅಲ್ಲ. ಬದಲಿಗೆ ಸಹಬಾಳ್ವೆ ನಡೆಸಲು ಇನ್ನೂ 10 ವರ್ಷಗಳವರೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವೇ ಇಲ್ಲ ಎಂದು ಅಮುಲ್‌ ಬ್ರ್ಯಾಂಡ್‌ನ್ನು ಮುನ್ನಡೆಸುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ ಹೇಳಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಡೈರಿ ದೈತ್ಯ ಅಮುಲ್‌ನ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ರಾಜಕೀಯ, ಸಾಮಾಜಿಕ ನಾಯಕರು ಕರೆ ನೀಡಿದ್ದರೆ, ಇನ್ನೊಂದೆಡೆ ಅಮುಲ್‌ Vs ನಂದಿನಿ ಗದ್ದಲ ತಾರಕಕ್ಕೇರಿದೆ. ಇಂಥಹ ಮಹತ್ವದ ಸಂದರ್ಭದಲ್ಲಿ ಆಂಗ್ಲ ಮಾಧ್ಯಮಗಳಿಗೆ ಸಂದರ್ಶನ ನೀಡಿರುವ ಜಯನ್‌ ಮೆಹ್ತಾ ಕರ್ನಾಟಕದಲ್ಲಿ ಅಮುಲ್‌ನ ವಹಿವಾಟಿನ ಆಳ-ಅಗಲ, ಗುರಿ-ಉದ್ದೇಶಗಳನ್ನು ಬಿಚ್ಚಿಟ್ಟಿದ್ದಾರೆ.

ಅಮುಲ್‌ ವರ್ಸಸ್‌ ನಂದಿನಿ ಅಲ್ಲ : ಇದು ಅಮುಲ್ ವರ್ಸಸ್ ನಂದಿನಿ ಅಲ್ಲ. ಬದಲಿಗೆ ಅಮುಲ್ ಮತ್ತು ನಂದಿನಿ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುತ್ತಿರುವ ರೈತರ ಮಾಲಿಕತ್ವದ ಸಹಕಾರಿ ಸಂಸ್ಥೆಗಳು. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಮುಲ್ ಬಹಿಷ್ಕರಿಸಿ ಮತ್ತು ಗೋಬ್ಯಾಕ್ ಅಮುಲ್ ನಂತಹ ಘೋಷಣೆಗಳಿಗೆ ಪ್ರತಿಕ್ರಿಯಿಸಿರುವ ಮೆಹ್ತಾ, ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಆಗಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರೇ. ತಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಅವರು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಬಾಂಧವ್ಯವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಹಲವು ವಿಚಾರಗಳಲ್ಲಿ ನಾವು ನಂದಿನಿಯೊಂದಿಗೆ ಕೈ ಜೋಡಿಸಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿಯೇ ನಾವು ಅಮುಲ್ ಐಸ್ ಕ್ರೀಂ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗ ನಾವು ನಂದಿನಿಯಿಂದಲೇ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ ಎಂದು ಹೇಳಿದ್ದಾರೆ.ಅಮುಲ್‌ ಹಾಲು ಮತ್ತು ಮೊಸರನ್ನು ಚಿಲ್ಲರೆ ವ್ಯಾಪಾರಿಗಳಿಗೆ ಪೂರೈಕೆ ಮಾಡುವುದನ್ನು ತಳ್ಳಿ ಹಾಕಿರುವ ಅವರು, ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ಕ್ವಿಕ್‌ ಕಾಮರ್ಸ್‌ ವೇದಿಕೆಗಳ ಮೂಲಕ ಮಾತ್ರ ಹಾಲು ಹಾಗೂ ಮೊಸರನ್ನು ಮಾರಾಟ ಮಾಡಲು ಯೋಜಿಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago