ಮುಂಬೈ: 2000 ರೂ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆದ ಬಳಿಕ ಈ ವರೆಗೂ ಶೇ.72ರಷ್ಚು ನೋಟುಗಳು ಬ್ಯಾಂಕಿಗೆ ವಾಪಸ್ ಆಗಿದ್ದು, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.
ದೇಶದಲ್ಲಿ 2 ಸಾವಿರ ರೂ. ಮುಖ ಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುತ್ತಿರುವುದು ದೇಶದ ಆರ್ಥಿಕತೆ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಿಲ್ಲ ಎಂದು ರಿಸರ್ವ್ ಬ್ಯಾಂಕ್‌ನ ಗವರ್ನರ್ ಶಕ್ತಿಕಾಂತದಾಸ್ ಹೇಳಿದ್ದಾರೆ.
ಕಳೆದ ಮೇ 19 ರಂದು ರಿಸರ್ವ್ ಬ್ಯಾಂಕ್ 2 ಸಾವಿರ ಮುಖ ಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ತೀರ್ಮಾನ ಮಾಡಿತ್ತು. ಈ ನೋಟುಗಳನ್ನು ಜನ ಸೆಪ್ಟೆಂಬರ್ 3 ರವರೆಗೂ ಬ್ಯಾಂಕ್‌ಗಳಲ್ಲಿ ಬದಲಿಸಲು, ಠೇವಣಿ ಮಾಡಲು ಅವಕಾಶವನ್ನು ಕಲ್ಪಿಸಿತ್ತು. ಇದರಿಂದ ದೇಶದ ಆರ್ಥಿಕತ ಮೇಲೆ ವ್ಯತಿರಿಕ್ತ ಪರಿಣಾಮಗಳಾಗಬಹುದು ಎಂಬ ವರದಿಗಳು ಸುಳ್ಳಾಗಿದ್ದು, 2 ಸಾವಿರ ಮುಖ ಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ನಿರ್ಧಾರದಿಂದ ಆರ್ಥಿಕತೆ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರಿಲ್ಲ ಎಂದು ರಿಸರ್ವ್ ಬ್ಯಾಂಕ್‌ನ ಶಕ್ತಿಕಾಂತ್ ದಾಸ್ ಆಂಗ್ಲ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಭಾರತದ ಆರ್ಥಿಕತೆ ಅನಿಶ್ಚಿತತೆಯ ಸವಾಲುಗಳನ್ನು ಎದುರಿಸುತ್ತಿದೆ. ನಮ್ಮ ಮುಂದೆ 2-3 ಸವಾಲುಗಳಿವೆ. ಮೊದಲನೆಯದು ಅಂತಾರಾಷ್ಟ್ರೀಯ ಅನಿಶ್ಚಿತತೆ, ಎರಡನೆಯದು ಎಲ್ನಿನೋ ಚಂಡಮಾರುತದ ಮುನ್ಸೂಚನೆ ಮತ್ತು ಇತರ ಮುಖ್ಯವಾಗಿ ಹವಮಾನ ಸಂಬಂಧಿತ ಅನಿಶ್ಚಿತತೆಯ ಸವಾಲುಗಳು ದೇಶದ ಆರ್ಥಿಕ ಪರಿಸ್ಥಿತಿಯ ಮುಂದಿವೆ. ಅಲ್ಲದೆ ಹಣ ದುಬ್ಬರವನ್ನು ಶೇ.4ಕ್ಕೆ ಇಳಿಸಲು ಶ್ರಮಿಸುತ್ತಿದ್ದೇವೆ. ಆಹಾರ, ಹಣ ದುಬ್ಬರಕ್ಕೆ ಎಲ್ನಿನೋ ಮುನ್ಸೂಚನೆ ಸವಾಲಾಗಿದೆ ಎಂದು ಅವರು ಹೇಳಿದರು.
ಭಾರತೀಯ ರಿಸರ್ವ್ ಬ್ಯಾಂಕ್ 2 ಸಾವಿರ ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂತೆಗೆದುಕೊಳ್ಳುವ ತೀರ್ಮಾನ ಮಿನಿ ನೋಟ್ ಅಮಾನೀಕರಣ ಎಂದು ವಿಶ್ಲೇಷಿಸಲಾಗಿತ್ತು. ಇದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮಗಳಾಗಬಹುದು ಎಂದು ಹೇಳಲಾಗಿತ್ತು. ಆದರೆ ಶಕ್ತಿಕಾಂತ್ ದಾಸ್ ಅವರು 2 ಸಾವಿರ ಮುಖ ಬೆಲೆಯ ನೋಟುಗಳ ಚಲಾವಣೆಯಿಂದ ಹಿಂತೆಗೆದುಕೊಳ್ಳುವ ತೀರ್ಮಾನದಿಂದ ಆರ್ಥಿಕತೆ ಮೇಲೆ ಪರಿಣಾಮ ಆಗಿಲ್ಲ ಎಂದು ಹೇಳಿದ್ದಾರೆ.
‘ದೇಶದಲ್ಲಿ 2016 ನವೆಂಬರ್ 8 ರಂದು ನೋಟುಗಳ ಅಮಾನೀಕರಣ ಮಾಡಿದ ನಂತರ ಹೊಸದಾಗಿ 2 ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು ಚಲಾವಣೆಗೆ ಬಿಡಲಾಗಿತ್ತು. ಈಗ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ತೀರ್ಮಾನವನ್ನು ರಿಸರ್ವ್ ಬ್ಯಾಂಕ್ ಮಾಡಿದ್ದು, ಸೆ. 30 ರವರೆಗೂ ಈ ನೋಟುಗಳು ಚಲಾವಣೆಯಲ್ಲಿರುತ್ತವೆ. ಜನರು ಬ್ಯಾಂಕ್‌ಗಳಲ್ಲಿ 2 ಸಾವಿರ ಮುಖ ಬೆಲೆಯ ನೋಟುಗಳನ್ನು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…