Mysore
20
overcast clouds
Light
Dark

ಕಾಂಗ್ರೆಸ್‌ ಪಕ್ಷದಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಕಾಗ್ರೆಸ್‌ ಪಕ್ಷದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಕೂಡಾ ಆಗಿಲ್ಲ. ಅವರನ್ನು ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಎಂದು ನಾವು ಅವರಿಗೆ ಟಿಕೆಟ್‌ ನೀಡಿದೆವು. ವಿಧಾನ ಸಭಾ ಚುನಾವಣೆಯಲ್ಲಿ ಅವರು ಸೋತರು. ನಂತರ, ಅವರಿಗೆ ಗೌರವವಾಗಿ ಎಂಎಲ್‌ಸಿ ಮಾಡಿದೆವು. ಈ ಬೆಳವಣಿಗೆ ಬಗ್ಗೆ ನನಗೆ ಮಾಹಿತಿಯಿಲ್ಲ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿರಾಜಪೇಟೆಯ ಅಂಬಟ್ಟಿ ಗಾಲ್ಫ್ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಶೆಟ್ಟರ್‌ ಬಂದಿದ್ದೇ ಅವಮಾನ ಮಾಡಿದ್ದಾರೆ. ಮತ್ತು ಟಕೆಟ್‌ ನೀಡಿಲ್ಲ ಎಂದು. ಆದರೆ ಅವರು ವಿಧಾನಸಭಾ ಚುನಾವಣೆಯಲ್ಲಿ ಸೊತರು ಸಹಾ ನಾವು ಅವರನ್ನು ಎಂ ಎಲ್‌ ಸಿ ಮಾಡದ್ದೇವೆ. ಅವರಿಗೆ ನಮ್ಮಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದರು.

ಕಾಫಿ ಬೆಳೆಗಾರರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಬೇಡಿಕೆ ಈ ಹಿಂದೆ ಕೊಡಗಿನಲ್ಲಿದ್ದ ಬಿಜೆಪಿ ಶಾಸಕರು, ಸರ್ಕಾರ ಏನು ಮಾಡುತ್ತಿದ್ದರು?‌ ಕೊಡಗನ್ನು ಪ್ರತಿನಿಧಿಸುವ ಸಂಸದರ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೊಡಗಿನ ಬೆಳೆಗಾರರಿಗೆ 10 ಹೆಚ್.ಪಿ. ತನಕ ನೀರಾವರಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಒದಗಿಸುವ ಸಂಬಂಧ ಪರಿಶೀಲನೆ ನಡೆಸಲಾಗುವುದು‌ ಎಂದರು.

ಕಾಫಿ ಬೆಳೆಗಾರರ 10 ಹೆಚ್‌ಪಿವರೆಗಿನ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಕಲ್ಪಿಸುವ ಸಂಬಂಧ ಪರಿಶೀಲನೆ ನಡೆಸಲಾಗುವುದು. ಕೊಡಗಿ‌ನ 2 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿ ಹಲವು ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿದ್ದೇವೆ. ಇದು ಮತದಾರರ ಆಶೀರ್ವಾದ ಎಂದರು.

ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು‌.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ