ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲ್ಲ: ಎಚ್‌.ಡಿ.ಡಿ

ರಾಯಚೂರು: ಜಿಲ್ಲೆಯ ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದಾ ಅವರು, ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ. ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇದೇ ಮಾತನನ್ನು ಹೇಳಿದ್ದಾರೆ ಎಂದರು.

2023ರ ವಿಧಾನಸಭೆ ಚುನಾವಣೆ ಎದುರಾಗಲಿದೆ. ಈಗ ನಾನು ಯಾರನ್ನೂ ನಿಂದನೆ ಮಾಡುವುದಿಲ್ಲ. ಪಕ್ಷ ಕಟ್ಟುವುದಲ್ಲಿ ಸಂಪೂರ್ಣ ಸಕ್ರಿಯವಾಗಿರುತ್ತೇನೆ. ಅಸ್ಥಿರತೆಗೆ ನಾನು ಅವಕಾಶ ನೀಡುವುದಿಲ್ಲ. ಜಾತ್ಯತೀತ ಜನತಾದಳದ ವರಿಷ್ಠನಾಗಿ ತೀರ್ಮಾನ ಮಾಡಿದ್ದೇನೆ.

ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ. ನಮ್ಮಲ್ಲಿಯೂ 34 ಜನ ಶಾಸಕರಿದ್ದಾರೆ. ನಾವು ವಿಲೀನ ಆಗುತ್ತಾರೆ ಅಂತಾರೆ, ನಾನು ಯಾರ ಬಗ್ಗೆ ಟೀಕೆ ಮಾಡಲ್ಲ ಎಂದರು.

× Chat with us