BREAKING NEWS

ಗೃಹಜೋತಿ ಯೋಜನೆ ನೋಂದಣಿಗೆ ಕೊನೆಯ ದಿನಾಂಕವಿಲ್ಲ: ಸಚಿವ ಕೆ.ಜೆ.ಜಾರ್ಜ್

ಕಲಬುರುಗಿ : ಇದೇ ತಿಂಗಳ 27 ರ ಒಳಗೆ ನೋಂದಣಿ ಮಾಡಿಕೊಂಡವರಿಗೂ ಆಗಸ್ಟ್ ತಿಂಗಳ ವಿದ್ಯುತ್ ಬಳಕೆಯ ವಿನಾಯಿತಿ ಸೌಲಭ್ಯ ದೊರೆಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜುಲೈ 27 ರವರೆಗೆ ನೋಂದಣಿ ಮಾಡಿಕೊಂಡವರಿಗೆ ಸೌಲಭ್ಯ ದೊರಕುತ್ತಿದೆ. ನೋಂದಣಿಗೆ ಯಾವುದೇ ಕಾಲಮಿತಿಯಿಲ್ಲ. ಆದರೆ ಯಾವ ತಿಂಗಳಿನಲ್ಲಿ ನೋಂದಾಯಿಸಿಕೊಳ್ಳುತ್ತಾರೆ. ಆ ತಿಂಗಳಿನ ಸೌಲಭ್ಯ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.

ದೇಶದಲ್ಲೇ ಇದೊಂದು ಕ್ರಾಂತಿಕಾರಿ ಯೋಜನೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಬೆಲೆ ಏರಿಕೆ, ಹಣದುಬ್ಬರದಿಂದ ಸಂತ್ರಸ್ತರಾಗಿರುವ ಜನಸಾಮಾನ್ಯರಿಗೆ ಗೃಹಜ್ಯೋತಿ ಸಂಜೀವಿನಿಯಾಗಿದೆ. ಬಡವರಿಗೆ ಹಣ ಸಿಕ್ಕರೆ ಅದನ್ನು ಅವರು ಮನೆಯಲ್ಲಿಟ್ಟುಕೊಳ್ಳುವುದಿಲ್ಲ. ದೈನಂದಿನ ಅಗತ್ಯಗಳಿಗೆ ಬಳಕೆ ಮಾಡುತ್ತಾರೆ. ಇದರಿಂದ ಆರ್ಥಿಕಾಭಿವೃದ್ಧಿಯಾಗುತ್ತದೆ. ಗೃಹಜ್ಯೋತಿಯನ್ನು ಉಚಿತ ಕೊಡುಗೆ ಎನ್ನುವುದರ ಬದಲಾಗಿ ಆರ್ಥಿಕಾಭಿವೃದ್ಧಿಯ ಕಾರ್ಯಕ್ರಮ ಎಂದು ವಿಶ್ಲೇಷಿಸಬಹುದು ಎಂದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯವರು ಪಿತೂರಿ ಮಾಡಿ ಕಾಂಗ್ರೆಸ್‍ನಲ್ಲಿದ್ದ ವ್ಯಕ್ತಿಯನ್ನು ಸೆಳೆದುಕೊಂಡು ಚುನಾವಣೆಗೆ ನಿಲ್ಲಿಸಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅದಕ್ಕೆ ರಾಜ್ಯದ ಜನ ತಕ್ಕ ಉತ್ತರ ನೀಡುತ್ತಾರೆ. ಕಲಬುರ್ಗಿಯನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮನೆಯ ಪ್ರತಿಕೃತಿಯನ್ನು ಪ್ರದರ್ಶಿಸಿ ವಿದ್ಯುತ್ ದೀಪ ಹೊತ್ತಿಸಲಾಯಿತು. 10 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ಬಿಲ್ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪುರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

5 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

7 hours ago