ಕಲಬುರುಗಿ : ಇದೇ ತಿಂಗಳ 27 ರ ಒಳಗೆ ನೋಂದಣಿ ಮಾಡಿಕೊಂಡವರಿಗೂ ಆಗಸ್ಟ್ ತಿಂಗಳ ವಿದ್ಯುತ್ ಬಳಕೆಯ ವಿನಾಯಿತಿ ಸೌಲಭ್ಯ ದೊರೆಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜುಲೈ 27 ರವರೆಗೆ ನೋಂದಣಿ ಮಾಡಿಕೊಂಡವರಿಗೆ ಸೌಲಭ್ಯ ದೊರಕುತ್ತಿದೆ. ನೋಂದಣಿಗೆ ಯಾವುದೇ ಕಾಲಮಿತಿಯಿಲ್ಲ. ಆದರೆ ಯಾವ ತಿಂಗಳಿನಲ್ಲಿ ನೋಂದಾಯಿಸಿಕೊಳ್ಳುತ್ತಾರೆ. ಆ ತಿಂಗಳಿನ ಸೌಲಭ್ಯ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲೇ ಇದೊಂದು ಕ್ರಾಂತಿಕಾರಿ ಯೋಜನೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಬೆಲೆ ಏರಿಕೆ, ಹಣದುಬ್ಬರದಿಂದ ಸಂತ್ರಸ್ತರಾಗಿರುವ ಜನಸಾಮಾನ್ಯರಿಗೆ ಗೃಹಜ್ಯೋತಿ ಸಂಜೀವಿನಿಯಾಗಿದೆ. ಬಡವರಿಗೆ ಹಣ ಸಿಕ್ಕರೆ ಅದನ್ನು ಅವರು ಮನೆಯಲ್ಲಿಟ್ಟುಕೊಳ್ಳುವುದಿಲ್ಲ. ದೈನಂದಿನ ಅಗತ್ಯಗಳಿಗೆ ಬಳಕೆ ಮಾಡುತ್ತಾರೆ. ಇದರಿಂದ ಆರ್ಥಿಕಾಭಿವೃದ್ಧಿಯಾಗುತ್ತದೆ. ಗೃಹಜ್ಯೋತಿಯನ್ನು ಉಚಿತ ಕೊಡುಗೆ ಎನ್ನುವುದರ ಬದಲಾಗಿ ಆರ್ಥಿಕಾಭಿವೃದ್ಧಿಯ ಕಾರ್ಯಕ್ರಮ ಎಂದು ವಿಶ್ಲೇಷಿಸಬಹುದು ಎಂದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯವರು ಪಿತೂರಿ ಮಾಡಿ ಕಾಂಗ್ರೆಸ್‍ನಲ್ಲಿದ್ದ ವ್ಯಕ್ತಿಯನ್ನು ಸೆಳೆದುಕೊಂಡು ಚುನಾವಣೆಗೆ ನಿಲ್ಲಿಸಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅದಕ್ಕೆ ರಾಜ್ಯದ ಜನ ತಕ್ಕ ಉತ್ತರ ನೀಡುತ್ತಾರೆ. ಕಲಬುರ್ಗಿಯನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮನೆಯ ಪ್ರತಿಕೃತಿಯನ್ನು ಪ್ರದರ್ಶಿಸಿ ವಿದ್ಯುತ್ ದೀಪ ಹೊತ್ತಿಸಲಾಯಿತು. 10 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ಬಿಲ್ ಅನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪುರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…