BREAKING NEWS

ಪ್ರಧಾನಿ ಮೋದಿಯನ್ನು ಯಾರಿಂದಲೂ ಹೆದರಿಸಲು ಸಾಧ್ಯವಿಲ್ಲ: ವ್ಲಾಡಿಮಿರ್ ಪುಟಿನ್

ಮಾಸ್ಕೋ : ಭಾರತ ಮತ್ತು ಭಾರತೀಯರಿಗೆ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ಕ್ರಮ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ.

ರಷ್ಯಾದ ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್‌ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದ ಕುರಿತು ಮಾತನಾಡಿದ ಪುಟಿನ್‌, ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು. ಆದರೆ, ಅಂತಹ ಒತ್ತಡಗಳನ್ನು ಅವರು ಸಲೀಸಾಗಿ ನಿಭಾಯಿಸುತ್ತಾರೆ. ಇದನ್ನು ಯಾರು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿರ್ಧಾರಗಳು ನನ್ನನ್ನು ಆಶ್ಚರ್ಯಚಕಿತಗೊಳಿಸುತ್ತದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ.

ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕುರಿತು ಮಾತನಾಡುತ್ತಾ, ‘ಮೋದಿಯವರನ್ನು ಯಾರೂ ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು, ಅಂಥ ಒತ್ತಡವನ್ನು ಅವರು ಅನುಭವಿಸಬಹುದು ಎಂದು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತೀಯ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿಲುವು ನನಗೆ ಆಶ್ಚರ್ಯಕರವಾಗಿದೆ. ʼಸ್ನೇಹರಹಿತ ದೇಶಗಳʼ ಬಾಹ್ಯ ಒತ್ತಡದ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ದೃಢವಾದ ನಾಯಕತ್ವ ಭಾರತಕ್ಕೆ ದೊರೆತಿದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ತನ್ನೊಂದಿಗೆ ಮಾತನಾಡಿಯೇ ಇಲ್ಲ ಎಂದು ಶ್ಲಾಘಿಸಿದ್ದಾರೆ.

ಜೊತೆಗೆ ಭಾರತ- ರಷ್ಯಾ ಬಾಂಧವ್ಯವು ಎಲ್ಲಾ ರಂಗಗಳಲ್ಲಿ ಪ್ರಗತಿಯಲ್ಲಿದೆ. ಉಭಯ ದೇಶಗಳ ನಡುವಿನ ಸಂಬಂಧಗಳು ಎಲ್ಲಾ ಪಥಗಳಲ್ಲಿ ಪ್ರಗತಿಪರವಾಗಿ ಅಭಿವೃದ್ಧಿ ಹೊಂದುತ್ತಿವೆ. ಇದರ ಮುಖ್ಯ ಭರವಸೆ ಪ್ರಧಾನಿ ಮೋದಿ ಅವರು ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಪುಟಿನ್ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಕುರಿತು 45 ಸೆಕೆಂಡ್‌ಗಳ ಈ ಸಂದರ್ಶನದ ವಿಡಿಯೋ ಅಪ್ಲೋಡ್ ಆಗಿದ್ದು, ಲಕ್ಷಾಂತರ ವೀಕ್ಷಣೆ ಪಡೆದಿದೆ. ಎರಡು ದಿನಗಳ ʼಮಾಸ್ಕೋ ಕಾಲಿಂಗ್‌ʼ ಇವೆಂಟ್‌ನಲ್ಲಿ ಚೀನಾ, ಭಾರತ, ಟರ್ಕಿ, ಗಲ್ಫ್ ದೇಶಗಳು, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

https://x.com/AdityaRajKaul/status/1732884199047385427?s=20

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

7 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

7 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

7 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

7 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

7 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

7 hours ago