ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಆಡಳಿತ ಮಾಡುತ್ತಾರೆ. ಅವರು ಅವಧಿ ಪೂರೈಸುವ ವಿಶ್ವಾಸ ಇದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದರಲ್ಲಿ ಹುರುಳಿಲ್ಲ. ಅರ್ಧಕ್ಕೆ ಬಿಟ್ಟುಕೊಡುವ ಕುರಿತಂತೆ ಯಾರೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ ಆಪ್ತ ಸತೀಶ್ ಜಾರಕಿಹೊಳಿ ತಿಳಿಸಿದರು.
ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನ ಇದುವರೆಗೂ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ, ಅದ್ದರಿಂದ ಅವರೇ ಮುಂದುವರೆಯುತ್ತಾರೆ ಎನ್ನುವ ವಿಶ್ವಾಸ ಇದೆ, ಅದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದರು.
ಅಕ್ಕಿ ಖರೀದಿ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಣ್ಣ ಪುಟ್ಟ ಸಮಸ್ಯೆಗಳಿವೆ. ಸದ್ಯದಲ್ಲಿಯೇ ಎಲ್ಲವನ್ನೂ ಸರಿಪಡಿಸುತ್ತೇವೆ. ವಿರೋಧಪಕ್ಷ ಬಿಜೆಪಿಯವರು ವಿನಾಕಾರಣ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಹೋರಾಟ ಮಾಡುವುದು, ಬಿಡುವುದು ಆ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು 15 ಲಕ್ಷ ರೂಪಾಯಿ ಅಕೌಂಟ್ ಗೆ ಹಾಕಲಾಗುವುದು ಎಂಬ ಭರವಸೆ ನೀಡಿ 9 ವರ್ಷಗಳ ಮೇಲಾಯ್ತು. ಆದ್ರೂ ಇದುವರೆಗೂ ನಯಾಪೈಸೆ ಕೂಡ ಬಂದಿಲ್ಲ. ವಿದೇಶಗಳ ಬ್ಯಾಂಕ್ ನಲ್ಲಿ ಇಟ್ಟಿರುವ ಕಪ್ಪು ಹಣ ತರುತ್ತೇವೆ ಎಂದಿದ್ದರು. ಇಷ್ಟು ವರ್ಷವಾದರೂ ತರಲು ಆಗಿಲ್ಲ. ಅವರು ನೀಡಿದ್ದ 10 ಭರವಸೆಗಳು ಹಾಗೆಯೇ ಉಳಿದಿವೆ ಎಂದು ಆರೋಪಿಸಿದರು.
ಸಮಸ್ಯೆಗಳನ್ನು ಸರಿಪಡಿಸಲು ಕಾಲಾವಕಾಶ ಬೇಕು. ಎಲ್ಲವನ್ನೂ ಒಮ್ಮೆಲೆ ಸರಿಪಡಿಸುತ್ತೇವೆ ಎಂದರೆ ಆಗದು. ಬಿಜೆಪಿಯವರು ಪಠ್ಯ ಪರಿಷ್ಕರಣ ಮಾಡಿದ್ದು, ಶಿಕ್ಷಣ ನೀತಿಗೆ ವಿರುದ್ಧವಾಗಿದೆ. ಅದನ್ನು ಬದಲಾವಣೆ ಮಾಡ್ತೀವಿ ಎಂದು ಹೇಳಿದ್ದೇವೆ, ಬದಲಾವಣೆ ಮಾಡುತ್ತೇವೆ, ಇದರಲ್ಲಿ ಗೊಂದಲ ಇಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…