BREAKING NEWS

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ : ನಾಯಕರಿಗೆ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು‌ : ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಖಡಕ್ ಸೂಚನೆ ಕೊಟ್ಟಿದ್ದಾರೆ.

ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ ವೇದಿಕೆ ಆಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಅಧ್ಯಕ್ಷರ ಮಾತಿಗೆ ಎಲ್ಲರೂ ಬೆಲೆ ಕೊಟ್ಟರೆ ಸಹಜವಾಗಿಯೇ ಕಾಂಗ್ರೆಸ್ ಗೊಂದಲ ಬಗೆಹರಿಯಬಹುದು. ಡಿಕೆಶಿ ಮಾತಿಗೆ ಡೋಂಟ್ ಕೇರ್ ಎಂದು ಸಿದ್ದರಾಮಯ್ಯ ಟೀಂ ಮಾತು ಮುಂದುವರಿಸಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.

ಪರಿಸ್ಥಿತಿ ಹದಗೆಟ್ಟರೆ ಸಹಜವಾಗಿಯೇ ಬಲಾಬಲ ಪ್ರದರ್ಶನಕ್ಕೂ ವೇದಿಕೆ ಸೃಷ್ಟಿಯಾಗಲಿದೆ. ಕೆಪಿಸಿಸಿ ಅಧ್ಯಕ್ಷರ ಖಡಕ್ ವಾರ್ನಿಂಗ್ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯವಹುದು ಎನ್ನುವುದೇ ಸದ್ಯದ ಕುತೂಹಲ.

 

lokesh

Recent Posts

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

18 mins ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

42 mins ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

47 mins ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

53 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

1 hour ago

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

1 hour ago