BREAKING NEWS

ಧರ್ಮಸ್ಥಳದ ಬಗ್ಗೆ ವದಂತಿ ಬೇಡ, ಸೌಜನ್ಯ ಪ್ರಕರಣದ ತನಿಖೆಯಾಗಲಿ: ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹಾಗೂ ಸಾವು ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಒತ್ತಾಯಿಸಿದ್ದಾರೆ.

2011 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ.

ನಂತರದಲ್ಲಿ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ನೋವು ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗೂ ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.

ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಸದರಿ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಕು. ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಮಾನ್ಯ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ.

ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಹಾಗೂ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ವಿನಂತಿಸುತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

6 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

8 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago