BREAKING NEWS

ವಯನಾಡ್ ಉಪಚುನಾವಣೆ ಘೋಷಣೆಗೆ ಆತುರವಿಲ್ಲ: ಚುನಾವಣಾ ಆಯೋಗ

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ.
ಫೆಬ್ರುವರಿವರೆಗೆ ತೆರವಾಗಿರುವ ಸ್ಥಾನಗಳ ಆಧಾರದಲ್ಲಿ ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಯನಾಡ್ ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ. ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ನಾವು ಕಾಯುತ್ತೇವೆ ಎಂದು ತಿಳಿಸಿದ್ದಾರೆ.

ಗುಜರಾತ್ ನ್ಯಾಯಾಲಯ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ. ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತಿನಲ್ಲಿ ಇರಿಸಿ, ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರ ಬೆನ್ನಲ್ಲೇ ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಲೋಕಸಭಾ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.

ಕಾನೂನಿನ ಪ್ರಕಾರ, ಸ್ಥಾನ ತೆರವುಗೊಂಡ ಆರು ತಿಂಗಳೊಳಗೆ ಉಪಚುನಾವಣೆ ನಡೆಯಬೇಕಿದೆ. ಆದರೆ ಹಾಲಿ ಸಂಸದರ ಅವಧಿಯೂ ಒಂದು ವರ್ಷಕ್ಕೂ ಕಡಮೆಯಿದ್ದರೆ ಉಪಚುನಾವಣೆ ನಡೆಸುವಂತಿಲ್ಲ.

ವಯನಾಡ್ ಸಂಸದರ ಅವಧಿ ಇನ್ನೂ ಒಂದು ವರ್ಷಕ್ಕೂ ಹೆಚ್ಚಿದೆ. ಆದರೆ ನ್ಯಾಯಾಲಯದ ಮುಂದಿನ ಆದೇಶವನ್ನು ಗಮನದಲ್ಲಿಕೊಂಡು ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ ಎಂದು ರಾಜೀವ್ ಹೇಳಿದ್ದಾರೆ.

lokesh

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago