ಸ್ಟಾಕ್‌ಹೋಮ್: ನಾಟಕಕಾರ, ಕಾದಂಬರಿಕಾರ ಹಾಗೂ ನಾರ್ಡಿಕ್ ಬರವಣಿಗೆಯ ಮಾಸ್ಟರ್ ಜಾನ್ ಫಾಸ್ಸೆ ಅವರಿಗೆ 2023ನೇ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ ಲಭಿಸಿದೆ.
ಜಾನ್ ಫಾಸ್ಸೆ ಅವರ ಕಾದಂಬರಿಗಳು ಧ್ವನಿ ಇಲ್ಲದವರಿಗೆ ದನಿಯಾಗಿವೆ ಎಂದು ನೊಬೆಲ್ ಪ್ರಶಸ್ತಿ ಅಕಾಡೆಮಿ ಬಣ್ಣಿಸಿದೆ.
ಫಾಸ್ಸೆ ಅವರ ಕೆಲಸವು “ಅವರ ನಾರ್ವೇಜಿಯನ್ ಹಿನ್ನೆಲೆಯ ಭಾಷೆ ಮತ್ತು ಸ್ವಭಾವದಲ್ಲಿ” ಬೇರೂರಿದೆ ಎಂದು ನೊಬೆಲ್ ಸಾಹಿತ್ಯ ಸಮಿತಿಯ ಅಧ್ಯಕ್ಷ ಆಂಡರ್ಸ್ ಓಲ್ಸನ್ ಅವರು ಹೇಳಿದ್ದಾರೆ.
ಫಾಸ್ಸೆ ಅವರ ಹಲವಾರು ನಾಟಕಗಳು, ಕಾದಂಬರಿಗಳು, ಕವನ ಸಂಕಲನಗಳು, ಪ್ರಬಂಧಗಳು, ಮಕ್ಕಳ ಪುಸ್ತಕಗಳು ಮತ್ತು ಭಾಷಾಂತರಗಳನ್ನು ಒಳಗೊಂಡ ಹಲವು ಕೃತಿಗಳನ್ನು ಗೌರವಿಸಿ ಈ ನೊಬೆಲ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
64 ವರ್ಷದ ಜಾನ್ ಫಾಸ್ಸೆ ಅವರು ಎರಡು ಡಜನ್‌ಗಿಂತಲೂ ಹೆಚ್ಚು ನಾಟಕಗಳನ್ನು ಬರೆದಿದ್ದು, ನಾಲ್ಕು ದಶಕಗಳ ಕಾಲ ಕಾದಂಬರಿಗಳು, ಪ್ರಬಂಧಗಳು, ಕವನ ಸಂಕಲನಗಳು ಮತ್ತು ಮಕ್ಕಳ ಪುಸ್ತಕಗಳನ್ನು ಕೂಡ ಪ್ರಕಟಿಸಿದ್ದಾರೆ. ಇವರ ಲೇಖನ, ಬರಹಗಳು 40 ಭಾಷೆಗಳಲ್ಲೂ ಭಾಷಾಂತರಗೊಂಡಿವೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…