Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ವಿಧಾನ ಪರಿಷತ್‌ಗೆ ನಾಮನಿರ್ದೇಶನ: ಸರಕಾರದ ಶಿಫಾರಸ್ಸಿಗೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು : ವಿಧಾನ ಪರಿಷತ್‌ ಗೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮೋದನೆ ನೀಡಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದರು.

ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಸುಧಾಮ್ ದಾಸ್ ಅವರನ್ನ ಪರಿಷತ್ ಗೆ ನಾಮ ನಿರ್ದೇಶನಕ್ಕೆ ವಿರೋಧಿಸಿ ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಆರ್.ಬಿ ತಿಮ್ಮಾಪುರ್, ಹೆಚ್.ಸಿ ಮಹದೇವಪ್ಪ ಅವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ಇದೀಗ ಸುಧಾಮ್ ದಾಸ್ ಅವರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ