ಬೆಂಗಳೂರು : ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದರು.
ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಸುಧಾಮ್ ದಾಸ್ ಅವರನ್ನ ಪರಿಷತ್ ಗೆ ನಾಮ ನಿರ್ದೇಶನಕ್ಕೆ ವಿರೋಧಿಸಿ ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಆರ್.ಬಿ ತಿಮ್ಮಾಪುರ್, ಹೆಚ್.ಸಿ ಮಹದೇವಪ್ಪ ಅವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ಇದೀಗ ಸುಧಾಮ್ ದಾಸ್ ಅವರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ.
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…