ಬೆಂಗಳೂರು : ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿತ್ತು ಎಂಬ ವಿಚಾರ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.
ಕೋರ್ಟ್ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶ್ಯೂರಿಟಿಗಳಿಗೂ ಕೂಡ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಜೈಲು ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್‍ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು. ಆದರೆ ಸೋಮವಾರ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ಪರಪ್ಪನ ಅಗ್ರಹಾರದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.
ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವೀಡಿಯೋ ಸಿಕ್ಕಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ, ಶಶಿಕಲಾ ಹಾಜರಾಗಿರಲಿಲ್ಲ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…