ಮೈಸೂರು| ಬಣ್ಣ ಹೊಡೆಯುವಾಗ ಬಿದ್ದು ಗಂಭೀರ ಗಾಯ: ಆಸ್ಪತ್ರೆಗಳಿಗೆ ಅಲೆದು ಆಟೋದಲ್ಲೇ ವ್ಯಕ್ತಿ ಸಾವು!

ಮೈಸೂರು: ನಗರದ ಬಹುತೇಕ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೇ ಕೋವಿಡ್‌ ಸೋಂಕಿತರು ಪರದಾಡುವಂತಹ ಪರಿಸ್ಥಿತಿ ಇದೆ. ಇದರ ಮಧ್ಯೆಯೇ ಕೋವಿಡೇತರ ರೋಗಿಯೊಬ್ಬರು ಚಿಕಿತ್ಸೆಗೆ ಸಕಾಲಕ್ಕೆ ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ ಬಂದ ಆಟೋದಲ್ಲೇ ಪ್ರಾಣಬಿಟ್ಟಿರುವ ಧಾರುಣ ಘಟನೆ ಭಾನುವಾರ ನಗರದಲ್ಲಿ ನಡೆದಿದೆ.

ಕೆ.ಆರ್‌.ನಗರ ತಾಲ್ಲೂಕಿನ ಮಿರ್ಲೆ ನಿವಾಸಿ ಗ್ರಾಮದ ಶ್ರೀಕಾಂತ್ (34) ಮೃತ ವ್ಯಕ್ತಿ.

ಶ್ರೀಕಾಂತ್‌ ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದರು. ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಜಾರಿ ಕೆಳಗೆ ಬಿದ್ದಿದ್ದರು. ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿತ್ತು. ಕೋವಿಡ್ ಕಾರಣ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆ ಸಿಗದ ಹಿನ್ನೆಲೆ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಯಿಂದ ಆಸ್ಪತ್ರೆಗೆ ಸಾಗಿಸಿದರೂ ಎಲ್ಲೂ ಚಿಕಿತ್ಸೆಗೆ ದಾಖಲಿಸಿಕೊಂಡಿಲ್ಲ.

ಗಂಭೀರ ಸ್ಥಿತಿಯಲ್ಲಿದ್ದ ಶ್ರೀಕಾಂತ್‌ ಆಟೋದಲ್ಲೇ ಮೃತಪಟ್ಟಿದ್ದಾರೆ.

× Chat with us