ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಮತ್ತು ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ಎಂ.ರವಿ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ವಿಜಯ್‌ಕುಮಾರ್ ಎ.ಪಾಟೀಲ್ ಇದ್ದ ರಜಾ ಕಾಲದ ಪೀಠದಿಂದ ಪಿಐಎಲ್ ವಜಾಗೊಳಿಸಿ ಆದೇಶ ನೀಡಲಾಗಿದೆ.
ಆಯೋಗದ ಪರ ವಕೀಲರು ವಾದ ಮಂಡಿಸಿ, ಮತದಾನದ ಹಕ್ಕು ಮೂಲ ಹಕ್ಕಲ್ಲ. ಅದು ಕಾನೂನಿನ ಅನುಪಸ್ಥಿತಿಯಲ್ಲಿ ಅವರು ಮತದಾನ ಹಕ್ಕು ಪಡೆದುಕೊಳ್ಳಲು ಆಗುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಇದನ್ನು ಪರಿಗಣಿಸಿದ ನ್ಯಾಯಪೀಠ ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡಬೇಕು ಎನ್ನುವುದು ದೀರ್ಘಕಾಲದ ಚುನಾವಣಾ ನ್ಯಾಯಾಶಾಸ್ತ್ರಕ್ಕೆ ವಿರುದ್ಧವಾಗಿದ್ದು, ಹೀಗಾಗಿ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…