ಟೋಕಿಯೊ : ಮಿಲಿಟರಿ ಬಲ ಪ್ರದರ್ಶನಕ್ಕೆ ಮುಂದಾಗಿರುವ ಉತ್ತರ ಕೊರಿಯಾ, ಜಪಾನ್ ಕಡೆಗೆ ಖಂಡಾಂತರ ಕ್ಷಿಪಣಿ ಉಡಾಯಿಸಿದೆ. ಇದು ಕೊರಿಯಾ ಪೆನಿನ್ಸುಲಾ ಹಾಗೂ ಜಪಾನ್ ನಡುವಣ ಸಾಗರದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಲ್ಲಿ ಆಶ್ರಯ ಪಡೆಯುವಂತೆ ತನ್ನ ನಾಗರಿಕರಿಗೆ ಜಪಾನ್ ಎಚ್ಚರಿಕೆ ನೀಡಿದೆ.
ಉತ್ತರ ಕೊರಿಯಾದ ರಾಜಧಾನಿ ಪ್ಯೊಂಗ್‌ಯಾಂಗ್ ಸಮೀಪದಿಂದ ಕ್ಷಿಪಣಿ ಉಡಾಯಿಸಲಾಗಿದೆ ಎಂದು ದಕ್ಷಿಣ ಕೊರಿಯಾ ಹೇಳಿದೆ.
ಏತನ್ಮದ್ಯೆ ಉತ್ತರ ಕೊರಿಯಾ ಉಡಾವಣೆ ಮಾಡಿದ ಖಂಡಾಂತರ ಕ್ಷಿಪಣಿ ತನ್ನ ಪ್ರದೇಶದಲ್ಲಿ ಬಿದ್ದಿಲ್ಲ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ತಿಳಿಸಿದ್ದಾರೆ.
ಬಳಿಕ ಹೊಕ್ಕೈಡೊ ಪ್ರದೇಶದ ನಾಗರಿಕರಿಗೆ ನೀಡಿದ್ದ ಸೂಚನೆಯನ್ನು ಹಿಂಪಡೆಯಲಾಯಿತು.
ಈ ವರ್ಷ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಜಂಟಿ ಮಿಲಿಟರಿ ಸಮರಾಭ್ಯಾಸಕ್ಕೆ ಪ್ರತಿಯಾಗಿ ಉತ್ತರ ಕೊರಿಯಾ 30 ಕ್ಷಿಪಣಿಗಳನ್ನು ಉಡಾಯಿಸಿವೆ.
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…