BREAKING NEWS

ಉಚ್ಚಾಟನೆಗೆ ಹೆದರಲ್ಲ – ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

ಬಿಜೆಪಿ ಉಚ್ಚಾಟನೆ ಬಗ್ಗೆ ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಅವರು, ಬಿಜೆಪಿ ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಆದೇಶ ತಲುಪಿಲ್ಲ. ಮಾಧ್ಯಮದಿಂದ ಗೊತ್ತಾಗಿದೆ.

ಚುನಾವಣೆಗೆ ಸ್ವರ್ಧಿಸುವುದು ಖಚಿತ, ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೇನೆ. ಅದರಂತೆ ನಾನು ಕಣದಿಂದ ಹಿಂದೆ ಸರಿಯಲ್ಲ. ನಾಳೆಯಿಂದ ಇನ್ನಷ್ಟು ಚುರುಕಾಗಿ ಚುನಾವಣೆ ಪ್ರಚಾರ ಮಾಡುವೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

8 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

22 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

53 mins ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

3 hours ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

4 hours ago