ಹೈದರಾಬಾದ್: ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಸರ್ಕಾರ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಉಪಯೋಗವಾಗುವ ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಸಹಕರಿಸುತ್ತಿಲ್ಲ. ತೆಲಂಗಾಣದ ಸರ್ಕಾರ ಪರಿವಾರವಾದ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಪ್ರಧಾನಿ ಆರೋಪಿಸಿದರು.
‘ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರದ ಸಹಕಾರ ಸಿಗದಿರುವುದರಿಂದ ನಾನು ನೊಂದಿದ್ದೇನೆ. ಇದು ತೆಲಂಗಾಣದ ಜನರ ಕನಸಿಗೆ ಅಡ್ಡಿಯುಂಟು ಮಾಡುತ್ತಿದೆ. ತೆಲಂಗಾಣದ ಜನರಿಗೆ ತಲುಪಿಸಲು ಯೋಜನೆ ಮಾಡಿರುವಂಥ ಯೋಜನೆಗಳಿಗೆ ತಡೆಯುಂಟು ಮಾಡಬೇಡಿ ಎಂದು ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ‘ ಎಂದು ಮೋದಿ ಹೇಳಿದ್ದಾರೆ.
ಮುಖ್ಯಮಂತ್ರಿ ಕೆ.ಸಿ.ಆರ್ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ ಅವರು, ಕೆಲವರು ಪರಿವಾರವಾದವನ್ನು ಪೋಷಿಸುತ್ತಿದ್ದು, ತೆಲಂಗಾಣದ ಜನರಿಗೆ ಸಿಗಬೇಕಾದ ಪ್ರಯೋಜನವನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…